ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪನವರಿಂದ ತಿಪ್ಪೇಸ್ವಾಮಿ ಆರೋಗ್ಯ ವಿಚಾರಣೆ

0
33

ಚಳ್ಳಕೆರೆ-

ಾಜ್ಯದ ವಾಲ್ಮೀಕಿ ಸಮುದಾಯದ ಹಿರಿಯ ಮುತ್ಸದ್ದಿ, ಮಾಜಿ ಸಚಿವ ಕಾರ್ಖಾನೆ ತಿಪ್ಪೇಸ್ವಾಮಿ ಕಳೆದ ಆರು ದಿನಗಳಿಂದ ಬೆಂಗಳೂರಿನ ಖಾಸಗಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಐಸಿಯು ವಾರ್ಡ್‍ನಲ್ಲಿ ಇಡಲಾಗಿದೆ. ಆಸ್ಪತ್ರೆಯ ವೈದ್ಯರು ನಿರಂತರವಾಗಿ ಇವರ ಆರೋಗ್ಯ ಚೇತರಿಕೆಗೆ ಚಿಕಿತ್ಸೆ ನೀಡುತ್ತಿದ್ದರೂ ಇನ್ನೂ ಯಾವುದೇ ರೀತಿಯಲ್ಲಿ ಆರೋಗ್ಯ ಸುಧಾರಣೆಯಾಗಿಲ್ಲ. ಈಗಾಗಲೇ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಪುತ್ರ ಕೆ.ಟಿ.ಕುಮಾರಸ್ವಾಮಿ ಯವರೊಂದಿಗೆ ಆರೋಗ್ಯ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ಧಾರೆ.

    ರಾಜ್ಯ ವಿಧಾನ ಪರಿಷತ್‍ನ ಸದಸ್ಯ, ವಾಲ್ಮೀಕಿ ಸಮುದಾಯದ ಹಿರಿಯ ನಾಯಕರಾದ ವಿ.ಎಸ್.ಉಗ್ರಪ್ಪ ಶನಿವಾರ ಆಸ್ಪತ್ರೆಗೆ ತೆರಳಿ ತಿಪ್ಪೇಸ್ವಾಮಿಯವರ ಆರೋಗ್ಯವನ್ನು ವಿಚಾರಿಸಿದ್ಧಾರೆ. ಮಾಜಿ ಸಚಿವ ತಿಪ್ಪೇಸ್ವಾಮಿಯವರ ಆರೋಗ್ಯದ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here