ವಿಶ್ವಕರ್ಮ ಜಯಂತಿ ಯಶಸ್ವಿಗೆ ತಾಲ್ಲೂಕು ಆಡಳಿತದಿಂದ ಪೂರ್ವಸಿದ್ದತೆಗಳು ಜೋರು

0
174

ಚಳ್ಳಕೆರೆ

            ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ವಿಶ್ವಕರ್ಮ ಸಮಾಜ ಸಂಯುಕ್ತಾಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವಕರ್ಮ ಜಯಂತಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲು ನಿರ್ಧರಿಸಿದ್ದು, ಕಾರ್ಯಕ್ರಮದ ಯಶಸ್ಸಿಯ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ.
            ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ವಹಿಸಲಿದ್ದು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾರಾಮಣ್ಣ, ಉಪಾಧ್ಯಕ್ಷೆ ತಿಪ್ಪಮ್ಮ, ಟಿಎಪಿಎಂಸಿ ಅಧ್ಯಕ್ಷ ಸಿ.ವೀರಭದ್ರಬಾಬು, ಉಪಾಧ್ಯಕ್ಷ ಸೋಮಶೇಖರರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ, ಕನ್ಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ವಿಶ್ವಕರ್ಮ ಸಮಾಜದ ಅಧ್ಯಕ್ಷ ಡಿ.ವೆಂಕಟೇಶಚಾರ್ ಮಾಹಿತಿ ನೀಡಿ, ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್.ನಾರಾಯಣಚಾರ್, ಜಿಲ್ಲಾಧ್ಯಕ್ಷ ಜಯವೀರಚಾರ್, ನಗರಸಭಾ ಸದಸ್ಯ ಆರ್.ಮಂಜುಳಾ, ದೂರವಾಣಿ ಸಂಪರ್ಕ ಇಲಾಖೆ ಸಲಹೆಗಾರ ಆರ್.ಪ್ರಸನ್ನಕುಮಾರ್, ಕಾರ್ಯದರ್ಶಿ ಆರ್.ಬ್ರಹ್ಮಚಾರ್, ಗೌರವಾಧ್ಯಕ್ಷ ಸಿ.ಪಿ.ಮಂಜುನಾಥಚಾರ್, ಶಶಿಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಂದು ಬೆಳಗ್ಗೆ 9ಕ್ಕೆ ವಿಶ್ವಕರ್ಮ ಸಮಾಜದಿಂದ ಬೃಹತ್ ಮೆರವಣಿಗೆ ಹಾಗೂ ಮೋಟಾರ್ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here