ವೀರಶೈವ-ಲಿಂಗಾಯಿತ ಎರಡೂ ಒಂದೆ: ಡಾ.ಎಸ್ಸೆಸ್

0
27

ದಾವಣಗೆರೆ :

  ವೀರಶೈವ – ಲಿಂಗಾಯಿತ ಒಂದೇ ಆಗಿದ್ದು, ಸಮುದಾಯದವರು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ತಿಳಿಸಿದರು.

  ಧಾರವಾಡ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಧಾರವಾಡದ ಲಿಂಗಾಯಿತ ಭವನದಲ್ಲಿ ಹಮ್ಮಿಕೊಂಡಿದ್ದ ಅತಿ ಹೆಚ್ಚು ಅಂಕ ಗಳಿಸಿದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  ವೀರಶೈವ-ಲಿಂಗಾಯಿತ ಎಂದು ಭೇದ ತೊರದೇ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಕಾರ್ಮೋಖವಾಗಬೇಕೆಂದು ಕರೆ ನೀಡಿದರು.

  ಇದೇ ವೇಳೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ, ರಾಜ್ಯಾಧ್ಯಕ್ಷ ತಿಪ್ಪಣ್ಣ, ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಕಾರ್ಯದರ್ಶಿ ರೇಣುಕಾ ಪ್ರಸನ್ನ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here