ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ

0
17

ದಾವಣಗೆರೆ:

    ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಬೇಕಾದರೆ, ಪಠ್ಯದ ಜೊತೆಗೆ ಪಠ್ಯೇತ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕೆಂದು ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ ಕರೆ ನೀಡಿದರು.
ನಗರದ ರೋಟರಿ ಬಾಲಭವನದಲ್ಲಿ ಶನಿವಾರ ಕೊಂಡಜ್ಜಿ ಬಸಪ್ಪ ವಿದ್ಯಾವರ್ಧಕ ಸಂಘದ ವತಿಯಿಂದ ಆಯೋಜಿಸಿದ್ದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸರ್ವಧರ್ಮ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತಗೊಳ್ಳಬಾರದು. ಇದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳಲ್ಲಿದೆ ಎಂದ ಅವರು, ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಬಳಸುವುದರಿಂದ ಸ್ವಲ್ಪ ದೂರ ಇರಬೇಕು. ಒಂದು ವೇಳೆ ಮೊಬೈಲ್ ಅತೀ ಹೆಚ್ಚು ಮೊಬೈಲ್ ಬಳಿಸಿದರೆ ನಿಮ್ಮ ಭವಿಷ್ಯವನ್ನೇ ಅದು ಹಾಳು ಮಾಡಲಿದೆ ಎಂದು ಸೂಚ್ಯವಾಗಿ ಎಚ್ಚರಸಿದರು.

\

   ಎಸ್‍ಎಸ್‍ಎಲ್‍ಸಿ ನಂತರ ಪಿಯುಸಿಗೆ ಹೋಗುವ ವಿದ್ಯಾರ್ಥಿಗಳಿಗೆ ಸ್ವತಂತ್ರ ಸಿಗುತ್ತದೆ. ಅದನ್ನು ದುರುಪಯೋಗ ಮಾಡಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಲಿದರು.
ಲಯನ್ಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ವಾಸುದೇವ್ ರಾಯ್ಕರ್ ಮಾತನಾಡಿ, ಸಾಧಿಸುವ ಛಲ ಹೊಂದಿದ್ದರೆ, ಅತ್ತ ಕಡೆ ಹೆಚ್ಚು ಗಮನ ಹರದು ಗುರಿ ಮುಟ್ಟಲು ಪ್ರೇರಣೆ ನೀಡಲಿದೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳಲು ಸಂಸ್ಕಾರಯುತ ಶಿಕ್ಷಣ ಪಡೆಯಬೇಕೆಂದು ಹೇಳಿದರು.

   ವಿದ್ಯಾವಂತರಾದ ಮೇಲೆ ತಂದೆ ತಾಯಿಯರನ್ನು ನೋಡಿಕೊಳ್ಳದೆ ಅವರನ್ನು ವೃದ್ದಾಶ್ರಮಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ವೃದ್ದಾಶ್ರಮಗಳು ಸಹ ಹೆಚ್ಚಾಗುತ್ತದೆ. ವಿದೇಶಗಳಲ್ಲಿ ಕೆಲಸ ಮಾಡುವುದರಿಂದ ತಮ್ಮ ಪ್ರತಿಷ್ಟೆ ಹೆಚ್ಚಾಗುತ್ತದೆ ಎಂಬ ಪರಿಕಲ್ಪನೆ ಹೊಂದಿರುತ್ತಾರೆ. ಅದರ ಬದಲಾಗಿ ನಮ್ಮ ದೇಶದಲ್ಲಿ, ಹಳ್ಳಿಗಳಲ್ಲಿ ಸಾಕಷ್ಟು ಸಾಧನೆ ಮಾಡುವ ಅವಕಾಶವಿದೆ. ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವವರೆಗೂ ಮೊಬೈಲ್‍ನ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

    ಕುಂಬಳೂರು ಸರ್ಕಾರಿ ಪದವಿ ಪೂರ್ವಕಾಲೇಜಿನ ಉಪನ್ಯಾಸಕಿ ಸುಮತಿ ಜಯಪ್ಪ ಮಾತನಾಡಿ, ಶಿಕ್ಷಣ ದೊಡ್ಡ ಆಸ್ತಿ. ಶಿಕ್ಷಣಕ್ಕೆ ಅಜ್ಞಾನದಿಂದ ಸುಜ್ಞಾನದ ಕಡೆಗೆ ಕರೆದೊಂಡು ಹೋಗುವ ಶಕ್ತಿಯಿದೆ. ವಿದ್ಯಾರ್ಥಿಗಳು ತಂತ್ರಜ್ಞಾನದ ಭರಾಟೆಯಲ್ಲಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸುತ್ತಿಲ್ಲ. ಪ್ರತಿಯೊಬ್ಬರಲ್ಲೂ ತಮ್ಮದೇ ಆದಂತಹ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಹೊರಹಾಕುವ ನಿಟ್ಟಿನಲ್ಲಿ ನಡೆದಾಗ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಅಂಕಗಳನ್ನು ಗಳಿಸಿದರೆ ಮಾತ್ರವಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

   ಈ ವೇಳೆ ಎಸ್‍ಎಸ್‍ಎಸ್ ಎಲ್ ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದುರ್ಗಾಂಬಿಕ ದೇವಸ್ಥಾನ ಸಮಿತಿಯ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಕೆ.ಸಿ.ನಿಂಗರಾಜ್, ಮಂಜುನಾಥ್ ಅಂಗಡಿ, ಸುರೇಶ್ ಭಾನುವಳ್ಳಿ, ಬಿ.ಓ.ಮಲ್ಲಿಕಾರ್ಜುನ್, ಯಲ್ಲಪ್ಪ ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here