ಶುಲ್ಕ ಹೆಚ್ಚಳಕ್ಕೆ ಒತ್ತಡ

0
26

ಬೆಂಗಳೂರು:

ವೈದ್ಯಕೀಯ ಕೋರ್ಸ್‍ಗಳ ಪ್ರವೇಶ ಶುಲ್ಕವನ್ನು ಶೇ 30 ರಷ್ಟು ಹೆಚ್ಚಿಸುವಂತೆ ವೈದ್ಯಕೀಯ ಕಾಲೇಜುಗಳ ಸಂಘ ಒತ್ತಡ ಹೇರಿದ್ದು, ಸರ್ಕಾರ ಶೇ 10ಕ್ಕಿಂತ ಹೆಚ್ಚು ಏರಿಕೆ ಸಾಧ್ಯವೇ ಇಲ್ಲ ಎಂದು ಪಟ್ಟು ಹಿಡಿದಿದೆ. ಹೀಗಾಗಿ ಸರ್ಕಾರ ಮತ್ತು ಆಡಳಿತ ಮಂಡಳಿಗಳ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದೆ.

      ವೈದ್ಯಕೀಯ ಕಾಲೇಜುಗಳ ಸಂಘದ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿದ ಅವರು, ನಂತರ ಸುದ್ದಿಗಾರರ ಜತೆ ಮಾತನಾಡಿ, ಸಂಘದ ಪಧಾಧಿಕಾರಿಗಳು ಶೇ 30 ರಷ್ಟು ಶುಲ್ಕ ಏರಿಕೆಗೆ ಪಟ್ಟು ಹಿಡಿದಿದ್ದಾರೆ. ಆದರೆ ಇದು ರಾಜ್ಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹೀಗಾಗಿ 10% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪುತ್ತಿಲ್ಲ ಎಂದರು.

      ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೆಚ್ಚು ಹೊರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಈ ಬಗ್ಗೆ ಶನಿವಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, ಅಲ್ಲಿ ಅವರನ್ನು ಮನವೊಲಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here