ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತೆ ತಿಳಿಸಿದರು.

0
19

    ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುವಂತೆ ಕರೆನೀಡಿದ ಅವರು, ಕ್ರೀಡೆಗಳಲ್ಲಿ ಉತ್ತಮ ಸೌಹಾರ್ಧತೆಯಿಂದ ಭಾಗವಹಿಸಬೇಕು. ಕೇವಲ ಗೆಲುವಿಗಾಗಿಯೆ ಭಾಗವಹಿಸಬಾರದು. ಇದು ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

   ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಅಶ್ವತ್ಥಪ್ಪ ಮಾತನಾಡಿ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲೂ ಕ್ರೀಡಾ ಕೂಟ ಮೊದಲ ಹಂತದಲ್ಲಿ ನಡೆಯುತ್ತಿದ್ದು ಇಲ್ಲಿ ಗೆದ್ದಂತಹ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಭಾಗವಹಿಸುತ್ತಾರೆ. ನಮ್ಮ ತಾಲ್ಲೂಕಿನಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾ ಪಟುಗಳಿದ್ದಾರೆ. ಈ ಬಾರಿ ರಾಜ್ಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಗೆಲುವು ಪಡೆಯುತ್ತಾರೆ ಎಂಬ ವಿಶ್ವಾಸದಲ್ಲಿದ್ದೇವೆ ಎಂದು ತಿಳಿಸಿದರು.

   ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಕೆಪಿಸಿಸಿ ಸದಸ್ಯ ಕೆ.ಆರ್.ತಾತಯ್ಯ, ಮುಖ್ಯ ಶಿಕ್ಷಕರಾದ ಶಾಂತರಾಜು, ಎಸ್.ಷಡಾಕ್ಷರಿ, ದಯಾನಂದ್, ರವಿಕುಮಾರ್, ಸತೀಶ್, ನಾಗೇಶ್ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here