ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನ : ಕಾರ್ಯಸಾಧ್ಯತಾ ವರದಿ ಸಲ್ಲಿಸಲು ಸೂಚನೆ

0
12
 
ಬೆಂಗಳೂರು:
      ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಚುಂಚನಕಟ್ಟೆಯ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
      ಬೀದರ್ ಹಾಗೂ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆದು ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
      ಸಭೆಯಲ್ಲಿ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್, ಸಹಕಾರ ಸಚಿವ ಬಂಡೆಪ್ಪಾ ಕಾಶೆಂಪೂರ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವ ಪುಟ್ಟರಾಜು, ಆರ್ಥಿಕ ಇಲಾಖೆ, ಸಹಕಾರ ಇಲಾಖೆ, ಸಕ್ಕರೆ ಇಲಾಖೆ ಆಯುಕ್ತರು ಮತ್ತಿತರ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here