ಸಾರಿಗೆ ನೌಕರರ ಮುಷ್ಕರ : ಸಹಕರಿಸದ ಬಿಎಂಟಿಸಿ, ಕೆಎಸ್ಆರ್ ಟಿಸಿ

0
44

ಬೆಂಗಳೂರು: 

      ಇಂದು ಮೋಟಾರು ವಾಹನ ತಿದ್ದುಪಡಿ ಮಸೂದೆ –2017ಕ್ಕೆ ವಿರೋಧಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

      ಮೋಟಾರು ವಾಹನ ತಿದ್ದುಪಡಿ ಮಸೂದೆ ಜಾರಿಯನ್ನು ತಡೆಯಬೇಕು ಎಂದು ಆಗ್ರಹಿಸಿ,  ಕೆಲ ಸಂಘಟನೆಗಳ ಮುಖಂಡರು ಪುರಭವನದ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ, ಇಲ್ಲಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಬಹಿರಂಗ ಸಭೆ ಮಾಡಿದರು.

      ನಗರ ಸಾರಿಗೆ, ಆಟೋ ರಿಕ್ಷಾ, ಓಲಾ, ಉಬರ್‌ ಕ್ಯಾಬ್‌ಗಳು ಎಂದಿನಂತೆ ಸಂಚರಿಸುತ್ತಿವೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಎಂದಿನಂತೆ ಇರಲಿವೆ ಎಂದು ಎರಡೂ ನಿಗಮಗಳ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು.

LEAVE A REPLY

Please enter your comment!
Please enter your name here