ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್

0
32

ಮಡಿಕೇರಿ,

ಕೊಡಗು ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಎರಡನೇ ಶುಕ್ರವಾರ ಮಡಿಕೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಕೊಡಗು ಜಿಲ್ಲೆಯಲ್ಲಿ ಜೂನ್-ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ನಷ್ಟ ಉಂಟಾಗಿದೆ. ಈ ಸಂಬಂಧ, ಮುಖ್ಯಮಂತ್ರಿಯವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ 100 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಅನಧಿಕೃತ ಹೋಂ ಸ್ಟೇ ಗಳ ನೋಂದಣಿಗೆ ಆಗಸ್ಟ್ 2 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಸಾಕಷ್ಟು ಅರ್ಜಿಗಳು ಬಂದಿವೆ. ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here