ಸಾಲಬಾಧೆಗೆ ರೈತ ಆತ್ಮಹತ್ಯೆ

0
29

ದಾವಣಗೆರೆ :

 

ಸಾಲಬಾಧೆ ತಾಳಲಾರದೇ, ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮದಲ್ಲಿ ನಡೆದಿದೆ.
ರುದ್ರೇಶ್ (30) ಆತ್ಮಹತ್ಯೆಗೆ ಶರಣಾಗಿರುವ ರೈತನಾಗಿದ್ದು, ಕಳೆದ ರಾತ್ರಿ ರುದ್ರೇಶ್ ತಮ್ಮ ಜಮೀನಿನಲ್ಲಿರುವ ತೋಟದ ಮನೆಯಲ್ಲಿ ವಿಷ ಸೇವಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.
ಎರಡೂವರೆ ಎಕರೆ ಜಮೀನು ಹೊಂದಿರುವ ರುದ್ರೇಶ್ ಕತ್ತಲಗೆರೆಯ ವಿಜಯಬ್ಯಾಂಕ್ ನಲ್ಲಿ 4 ಲಕ್ಷ ಸಾಲ, ಕೈಗಡವಾಗಿ 6 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.
ಈ ಕುರಿತು ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here