ಸಿಎಂ ಮಾಧ್ಯಮಗಳ ಕುರಿತು ಕೀಳಾಗಿ ಮಾತನಾಡುವುದು ತಪ್ಪು

0
21

ಶಿರಸಿ:

      ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಪತ್ರಿಕಾ ರಂಗಕ್ಕೂ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗಗಳಿಗೆ ಇದ್ದಹಾಗೆ ಅದರದ್ದೇ ಆದ ಸ್ಥಾನ-ಮಾನವಿದೆ. ಮುಖ್ಯಮಂತ್ರಿಯವರು ಮಾಧ್ಯಮಗಳ ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ ಎಂದು ಶಾಸಕ ವಿಶ್ವೇಶ್ವರ ಹೆಗ್ಡೆ ಕಾಗೇರಿ ಆರೋಪಿಸಿದ್ದಾರೆ.

      ಪ್ರತ್ಯೇಕ ಕರ್ನಾಟಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಧ್ಯಮಗಳನ್ನು ದೂರಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಶಾಸಕರು, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಮಾಧ್ಯಮಗಳ ಮೇಲೆ ಹರಿಹಾಯುವುದು ಸರಿಯಲ್ಲ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here