ಸಿ.ಎಂ.ರಿಂದ ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ

0
40

ಬೆಂಗಳೂರು:

Image result for yeddyurappa kumaraswamy

      ಜಾತಿ ಎಂಬ ವಿಷಬೀಜ ಬಿತ್ತಿ ಸಮಾಜ ಹೊಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.

      ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಇದುವರೆಗೂ ಯಾವೊಬ್ಬ ಮುಖ್ಯಮಂತ್ರಿಗಳು ಸಹ ಈ ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ಆದರೆ, ಮುಖ್ಯಮಂತ್ರಿಗಳು ತಮ್ಮ ಧಿಮಾಕಿನಿಂದಾಗಿ ಇಂತಹ ಕಾರ್ಯಕ್ಕೆ ಕೈ ಹಾಕಿರುವುದು ಸರಿಯಾದುದಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ ವಿರುದ್ದ ಹುಚ್ಚಾಪಟ್ಟೆ ಮಾತನಾಡುತ್ತಾರೆ. ವಿವಿಧ ಇಲಾಖೆಗಳಲ್ಲಿ ಹಿಂದಿನ 10 ಸಾವಿರ ಕೋಟಿ ರೂ.ಗಳ ಸಾಲ ಇದೆ. ನಿಮ್ಮ ಹುಳುಕು ಮುಚ್ಚಿಕೊಳ್ಳಲು ಮಾಧ್ಯಮಗಳನ್ನು ನಿಯಂತ್ರಿಸಲು ಯತ್ನಿಸುತ್ತಿದ್ದೀರಾ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here