ಸುಸಂಸ್ಕೃತ ನಿರ್ಮಾಣ ಮಾಡಲು ಕರೆ

0
16

ಗುಬ್ಬಿ
     ಆಧುನಿಕತೆ ಬೆಳೆದಂತೆ ನಮ್ಮ ಸನಾತನ ಧಾರ್ಮಿಕ ಆಚರಣೆಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಧರ್ಮ ಮತ್ತು ಧಾರ್ಮಿಕ ಆಚರಣೆಗಳು ಭಕ್ತಿ ಭಾವದಿಂದ ನಡೆಸುತ್ತಿರುವುದು ಅಭಿನಂದನೀಯವಾದುದಾಗಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಬದುಕಿನಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವತ್ತ ಮುಂದಾಗುವಂತೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

    ತಾಲ್ಲೂಕಿನ ಅಮ್ಮನಘಟ್ಟ ಮಜರೆ ಹೊಸಹಟ್ಟಿ ಗ್ರಾಮದಲ್ಲಿ ಶ್ರೀತಿರುಮಲ ದೇವರ ಏಕಾದಶಿ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಸುಸಂಸ್ಕೃತಿ ಮತ್ತು ಸಂಪ್ರದಾಯಗಳು ಪ್ರತಿಯೊಬ್ಬರ ಬದುಕಿನಲ್ಲಿ ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುತ್ತವೆ. ಅಲ್ಲದೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಪಡೆಯಲು ಹೆಚ್ಚು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

   ಯಾದವ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ ಅವರು, ಹಿಂದುಳಿದ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸುವುದಾಗಿ ತಿಳಿಸಿದರು.
ಇದೆ ಸಂದರ್ಭದಲ್ಲಿ ದೇವಾಲಯದ ವತಿಯಿಂದ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

     ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಈರಬಿಳಿಯಪ್ಪ, ಗಿರಿಯಪ್ಪ, ದಾಸಪ್ಪ, ಗ್ರಾಮ ಪಂಚಾಯ್ತಿ ಸದಸ್ಯೆ ರಾಜೇಶ್ವರಿಸಿದ್ದರಾಜು, ಅಧ್ಯಾಪಕ ಬಸವರಾಜು, ಸಿದ್ದರಾಜು, ಅರ್ಚಕ ಶಿವಣ್ಣ, ದೊರೆಸ್ವಾಮಿ, ತಿಮ್ಮಯ್ಯ, ಶಿವಾಜಿರಾವ್, ಮೂರ್ತಿ ಸೇರಿದಂತೆ ಅಮ್ಮನಘಟ್ಟ, ಹೊಸಹಟ್ಟಿ ಮತ್ತು ವರದೇನಹಳ್ಳಿ ಸುತ್ತ ಮುತ್ತಲ ಗ್ರಾಮಸ್ಥರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here