ಸ್ವಯಂಪ್ರೇರಿತರಾಗಿ ಬಂದ್ ಮಾಡಲು ಮನವಿ

0
23

 ಗದಗ:

Related image

      ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಒತ್ತಾಯಿಸಿ ಆಗಸ್ಟ್ 2 ರಂದು ಹಮ್ಮಿಕೊಂಡಿರುವ ಉತ್ತರ ಕರ್ನಾಟಕ ಬಂದ್‍ಗೆ ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟು ಮುಚ್ಚಲು ಹೋರಾಟ ಸಮಿತಿ ಮನವಿ ಮಾಡಿದೆ.

      ಕಳೆದ ಬಜೆಟ್‍ನಲ್ಲಿ ಮುಖ್ಯ ಮಂತ್ರಿಗಳು ಉತ್ತರಕರ್ನಾಟಕದ ಅಭಿವೃದ್ದಿಗೆ ಒತ್ತು ನೀಡಿಲ್ಲ ಎಂದು ಆರೋಪಿಸಿ, ಈ ಭಾಗವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಪಟ್ಟು ಹಿಡಿದು ಈ ಬಂದ್‍ಗೆ ಕರೆ ನೀಡಿದೆ.

ಬಂದ್‍ಗೆ ಬೆಂಬಲವಿಲ್ಲ:

      ಉತ್ತರ ಕರ್ನಾಟಕ ಬಂದ್‍ಗೆ ನಮ್ಮ ಬೆಂಬಲ ಇಲ್ಲ ಎಂದು ಗದಗದ ವೀರೇಶ್‍ ಸೊರಬದ ಮಠ ಅವರು ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡುತ್ತಿದ್ದ ಅವರು ಉತ್ತರಕರ್ನಾಟಕವು ಅಭಿವೃದ್ದಿಯಲ್ಲಿ ಹಿನ್ನಡೆ ಹೊಂದಿದೆ.ರಾಜಕಾರಣಿಗಳ ಇಚ್ಚಾಶಕ್ತಿಯ ಕೊರತೆಯಿಂದ ಅಬಿವೃದ್ದಿ ಕುಂಠಿತಗೊಳ್ಳಲು ಕಾರಣವಾಗಿದೆ. ಅಭಿವೃದ್ಧಿಗಾಗಿ ಹೋರಾಟ ಮಾಡುವುದು ತಪ್ಪಲ್ಲ. ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವುದು ತಪ್ಪು. ನಮ್ಮ ಭಾಗದ ಅಭಿವೃದ್ದಿಗಾಗಿ ಜನಪ್ರತಿನಿಧಿಗಳ ಮನೆ ಮುಂದೆ ಪ್ರತಿಭಟನೆ ನಡೆಸುವಂತೆ ಅವರು ಕರೆ ನೀಡಿದರು.

LEAVE A REPLY

Please enter your comment!
Please enter your name here