ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಧ್ವಜಸ್ತಂಭ ಸ್ಥಳಾಂತರಕ್ಕೆ ಚಿಂತನೆ

0
30

ಚಳ್ಳಕೆರೆ-

   ಕಳೆದ ಹಲವಾರು ದಶಕಗಳಿಂದ ನಗರ ಬಿಎಂ ಸರ್ಕಾರಿ ಪ್ರೌಢಶಾಲೆ ಮೈದಾನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಳ್ಳುವ ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಇನ್ನಿತರೆ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ಸಿಯಾಗಿ ನಡೆಸಲಾಗುತ್ತಿದೆ.
ಪ್ರಸ್ತುತ ಈ ತಿಂಗಳ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ವರ್ಣರಂಜಿತವಾಗಿ ಆಚರಿಸಲು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಿರ್ಧರಿಸಿದ್ದು, ಸಮಿತಿ ಅಧ್ಯಕ್ಷ ತಹಶೀಲ್ದಾರ್ ಟಿ.ಸಿ.ಕಾಂತರಾಜು ಸೋಮವಾರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಹಿತದೃಷ್ಠಿಯಿಂದ ಕಾರ್ಯಕ್ರಮ ಯಶಸ್ಸಿಗೊಳಿಸುವ ದೃಷ್ಠಿಯಿಂದ ಈಗ ಹಾಲಿ ಇರುವ ಧ್ವಜಸ್ತಂಭವನ್ನು ರಂಗಮಂದಿರದ ಮುಂಭಾಗಕ್ಕೆ ಸ್ಥಳಾಂತರಿಸಲು ಸೂಚಿಸಿದರು. ಯಾವುದೇ ಸಂದರ್ಭದಲ್ಲೂ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

  ಈ ಸಂಧರ್ಭದಲ್ಲಿ ಪೌರಾಯುಕ್ತ ಜೆ.ಟಿ.ಹನುಮಂತರಾಜು, ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ಇಂಜಿನಿಯರ್ ಉಮೇಶ್, ಕಂದಾಯಾಧಿಕಾರಿ ಶರಣಬಸಪ್ಪ, ಪ್ರಕಾಶ್, ಪಿಎಸ್‍ಐ ಕೆ.ಸತೀಶ್‍ನಾಯ್ಕ, ಶಿಕ್ಷಕ ಶ್ರೀನಿವಾಸ್‍ಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here