ಸ್ವಾಮೀಜಿಗಳಿಗೆ ಯಾಕೆ ಬೇಕು ರಾಜಕೀಯ – ಹೊರಟ್ಟಿ

0
28

ವಿಜಯಪುರ:

Related image

      ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿರುವ ಕೆಲ ಸ್ವಾಮೀಜಿಗಳಿಗೆ ಯಾಕೆ ಬೇಕು ಈ ರಾಜಕೀಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.

      ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಮಾತನಾಡುತ್ತಿದ್ದ ಅವರು, ಕರ್ನಾಟಕ ರಾಜ್ಯದ ಇಬ್ಭಾಗಕ್ಕೆ ನನ್ನ ವಿರೋಧವಿದೆ. ಅದಕ್ಕೆ ನಾನು ಎಂದೂ ಒಪ್ಪುವುದಿಲ್ಲ. ಪ್ರತ್ಯೇಕದಿಂದಾಗಿ ಯಾವುದೇ ಉಪಯೋಗವಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಭೆ ನಡೆಸಿ ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಲಿದ್ದಾರೆ. ಸಭೆಗೆ ಮಠಾಧೀಶರು, ಹೋರಾಟಗಾರರು ಭಾಗವಹಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದಾಗಿದೆ. ಈ ಭಾಗಕ್ಕೆ ಯಾವುದೇ ರೀತಿಯ ಅನ್ಯಾಯವೆಸಗಿಲ್ಲ.  ಒಂದು ವೇಳೆ ಅನ್ಯಾಯವಾಗಿದ್ದರೆ, ಅದನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here