ಹಿಂದಿನ ಸರಕಾರದ ಕಾರ್ಯಕ್ರಮಗಳನ್ನು ಮುಂದುವರೆಸಲು ಕಾಂಗ್ರೆಸ್ ತಯಾರಿ

0
18

ಬೆಂಗಳೂರು:
ಹಿಂದಿನ ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುವಂತೆ ಒತ್ತಡ ಹೇರಲು ಕಾಂಗ್ರೆಸ್ ಮುಖಂಡರು ತೀರ್ಮಾನಿಸಿದ್ದಾರೆ.

      ಕಳೆದ ಸಮನ್ವಯ ಸಮಿತಿ ನಿರ್ಧಾರದಂತೆ ಹಿಂದಿನ ಸರ್ಕಾರದ ಬಹುತೇಕ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ: ಜಿ. ಪರಮೇಶ್ವರ್ ತಿಳಿಸಿದ್ದಾರೆ.

      ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾನ್ಯ ಕನಿಷ್ಠ ಕಾಯ್ಕ್ರಮ ಕುರಿತು ರಚನೆಯಾಗಿರುವ ಸಮಿತಿ ಸಲ್ಲಿಸಿರುವ ಕರಡು ಪ್ರತಿ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಗಿದೆ. ಅದರಂತೆ ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದರು.

      ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಸಮಿತಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡು ಪ್ರತಿ ನೀಡಿದ್ದು ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಪ್ರತಿಯಲ್ಲಿರುವ ಅನೇಕ ವಿಷಯಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ ಎಂದರು.

      ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ವೀರಪ್ಪಮೊಯ್ಲಿ, ಸಚಿವರಾದ ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ರವರನ್ನೊಳಗೊಂಡ ಐವರ ಸಮಿತಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಸೇರಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here