ಆದರ್ಶ ಕ್ರೀಡಾಪಟುಗಳಾಗಲು ವಿದ್ಯಾರ್ಥಿಗಳಿಗೆ ಕರೆ

ಗುಬ್ಬಿ

    ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಲಿದ್ದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ಕ್ರೀಡಾಪಟುಗಳಾಗುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಹೆಚ್.ಜಗನ್ನಾಥ್ ಕರೆನೀಡಿದರು.

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಖೋ-ಖೋ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಾಠ ಪ್ರವಚನದ ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆಗಳು ಹೆಚ್ಚು ಪರಿಣಾಮಕಾರಿಯಾಗಿದ್ದು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಪಡೆದುಕೊಳ್ಳುವಂತೆ ತಿಳಿಸಿದರು.

     ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ಉತ್ತಮ ಸ್ಪರ್ಧಾ ಮನೋಭಾವ ಮೂಡಿಸಲಿದ್ದು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಉತ್ತಮ ಕ್ರೀಡಾಪಟುಗಳಾಗುವಂತೆ ಕರೆನೀಡಿದ ಅವರು, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕೆ ಹೊರತು ಗೆಲುವಿಗಾಗಿ ಭಾಗವಹಿಸಬಾರದು. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಸೇರಿದಂತೆ ಹಲವು ಅವಕಾಶಗಳು ದೊರೆಯಲಿದ್ದು, ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವಂತೆ ಕರೆನೀಡಿದರು.

    ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗಾನಂದ್ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕ್ರೀಡೆಗಳು ಹೆಚ್ಚು ಸಹಕಾರಿಯಾಗಲಿದ್ದು ಕಲಿಕೆಯ ಜೊತೆಗೆ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಭಾಗವಹಿಸುವ ಮೂಲಕ ಆದರ್ಶ ವ್ಯಕ್ತಿಗಳಾಗುವಂತೆ ಕರೆನೀಡಿದ ಅವರು, ಕ್ರೀಡೆಗಳು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಿವೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟು ಜಿ.ಆರ್.ನಾಗರಾಜು ಮತ್ತು ಜಿಹೆಚ್‍ವಿಎಸ್ ಟ್ರಸ್ಟ್ ಅಧ್ಯಕ್ಷೆ ಉಮಾಕಾತ್ಯಾಯಿನಿ ಅವರನ್ನು ಸನ್ಮಾನಿಸಲಾಯಿತು.

     ಸಮಾರಂಭದಲ್ಲಿ ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಜಿ.ಕಲ್ಪನಾ, ಪಟ್ಟಣ ಪಂಚಾಯ್ತಿ ಸದಸ್ಯ ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ನಿಜಲಿಂಗಪ್ಪ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಷಡಾಕ್ಷರಿ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಅಶ್ವತ್ಥಪ್ಪ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಲ್.ರಾಜಣ್ಣ,

      ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಯಾನಂದಸರಸ್ವತಿ, ಕಾರ್ಯದರ್ಶಿ ಹೆಚ್.ಕೆ.ಭೈರಯ್ಯ, ಉಪಾಧ್ಯಾಯರ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ರಾಜಣ್ಣ, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವಯ್ಯ, ತಾಲ್ಲೂಕು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ರವೀಶ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಂತರಾಜು, ಸಿ.ಆರ್.ಪಿ ಜಗದೀಶ್, ಸಿದ್ದರಾಮಣ್ಣ ಸೇರಿದಂತೆ ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 6 ತಾಲ್ಲೂಕಿನ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು, ತಂಡದ ವ್ಯವಸ್ಥಾಪಕರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap