ಚಾರ್ಮಾಡಿಘಾಟ್‍ನಲ್ಲಿ ಸಂಚಾರ ಕಷ್ಟ ಕಷ್ಟ!!!!

ಚಿಕ್ಕಮಗಳೂರು:

                  ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾ.ಹೆ 48 ರಲ್ಲಿ ಶಿರಾಡಿ ಘಾಟಿಯಲ್ಲಿ ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳು ಚಾರ್ಮಾಡಿಘಾಟ್‍ನಲ್ಲಿ ಸಂಚರಿಸುವುದರಿಂದ ಘಾಟಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.

                 ಚಾರ್ಮಾಡಿಘಾಟ್‍ನಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್ ನ ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಮಧ್ಯೆ ದೊಡ್ಡ ಗಾಡಿಗಳ ಸಂಚಾರ ಕೂಡ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೊಂದೊಡ್ಡುತ್ತಿವೆ. ಗಂಟೆಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿರುವಂತಹ ಸ್ಥಿತಿ ನಿರ್ಮಾಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap