ಜಾತಿ ಪದ್ಧತಿ ನಿರ್ಮೂಲನೆಗೆ ಹೋರಾಡಿದ ಮಹಾನ್ ದಾರ್ಶನಿಕರು

ಹಾವೇರಿ

           ಬ್ರಹ್ಮಶ್ರೀ ನಾರಾಯಣಗುರುಗಳು ಉಚ್ಛ-ನೀಚ ಎಂಬ ಜಾತಿ ಪದ್ಧತಿ ನಿರ್ಮೂಲನೆಗೆ ಹೋರಾಡಿದ ಮಹಾನ್ ದಾರ್ಶನಿಕರು ಎಂದು ಶಾಸಕ ಸಿ.ಎಂ.ಉದಾಸಿ ಅವರು ಹೇಳಿದರು.
           ಇಂದು ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
            ಈಶ ಸೇವೆ ದೇಶ ಸೇವೆ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಬೋಧಿಸಿದ್ದ ಅವರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು. ಕೆಳಜಾತಿಯವರಿಗೆ ದೇವಸ್ಥಾನದಲ್ಲಿ ಪ್ರವೇಶವಿಲ್ಲದ್ದನ್ನು ಕಂಡು ಅವರು ಸ್ವತಃ ತಾವೇ ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಎಲ್ಲರಿಗೂ ದೇವರ ದರ್ಶನಕ್ಕೆ ಅವಕಾಶಮಾಡಿಕೊಟ್ಟಿದ್ದರು. ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅಂದಿನ ಕಾಲದಲ್ಲೇ ಸಂಸ್ಕತ, ಮಲಿಯಾಳಂ ಕಲಿತದ್ದ ಜ್ಞಾನಿ ಎಂದರು.
            ಸಂಪ್ರದಾಯಗಳ ಆಚರಣೆಯಿಂದ ಬದುಕಿನಲ್ಲಿ ಬದಲಾವಣೆ ಸಾಧ್ಯ ಹಾಗಾಗಿ ಅವರು ಹಾಕಿಕೊಟ್ಟ ಸಂಪ್ರದಾಯಗಳು ನಮಗೆ ದಾರಿದೀಪವಾಗಿವೆ. ನಾರಾಯಣ ಗುರುಗಳ ಬಗ್ಗೆ ತಿಳಿದುಕೊಳ್ಳಬೇಕು ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಬೇಕು. ಎಲ್ಲರೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು. ಅಕ್ಷರಜ್ಞಾನದಿಂದ ಸಮಾಜದಲ್ಲಿ ಸುಂದರ ಬದುಕು ಕಟ್ಟಿಕೊಳ್ಳಬಹುದು ಎಂದು ಹೇಳಿದರು.
ಇನ್ನೋರ್ವ ಅತಿಥಿಗಳಾದ ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ ಅವರು ಮಾತನಾಡಿ, ನಾರಾಯಣ ಗುರುಗಳ ಆದರ್ಶಗಳು ನಮಗೆ ಸ್ಪೂರ್ತಿಯಾಗಿವೆ. ಹಿಂದಿನ ಕಾಲದಲ್ಲಿ ಶಕ್ತಿಹೀನರು ಸಮಾಜದಲ್ಲಿ ತುಳಿತಕ್ಕೊಳಗಾಗುತ್ತಿದ್ದು. ಇಂತಹ ಪರಿಸ್ಥತಿಯಲ್ಲಿ ಈಡೀಗ ಸಮಾಜದಲ್ಲಿ ಧೈರ್ಯತುಂಬಿ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸಮಾಡಿದ್ದಾರೆ. ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳೋಣ. ಇಲ್ಲಿ ಯಾರೂ ಹೆಚ್ಚು ಇಲ್ಲ ಯಾರೂ ಕಡಿಮೆ ಇಲ್ಲ, ಎಲ್ಲರೂ ಒಂದೇ ಎಂಬ ಭಾವನೆ ನಮ್ಮದಾಗಬೇಕು. ಜಾತಿ ರಹಿತ ಸುಂದರ ಸಮಾಜ ನಿರ್ಮಾಣಕ್ಕೆ ಪ್ರಯತ್ನ ಮಾಡೋಣ ಎಂದು ಹೇಳಿದರು.
            ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಅವರು ಮಾತನಾಡಿ, ಈಗ ಕಾಲ ಬದಲಾಗಿದೆ 30 -40 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಅಸ್ಪøಶ್ಯರನ್ನು ಕೀಳಾಗಿ ಕಾಣುತ್ತಿದ್ದರು, ಕುಡಿಯಲು ನೀರು ಕೊಡುತ್ತಿರಲಿಲ್ಲ, ಆಹಾರವನ್ನು ದೂರಿನಿಂದ ಬಿಸಾಡುತ್ತಿದ್ದರು. ನಾರಾಯಣ ಗುರುಗಳು ತಮ್ಮ ಬಾಲ್ಯದಿಂದಲೇ ದಿಟ್ಟತನದಿಂದ ಜಾತಿ ಪದ್ಧತಿಯನ್ನು ವಿರೋಧಿಸುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಅವರ ತತ್ವಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಹಾಗೂ ಈಡಿಗ ಸಮಾಜದವರು ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಸಮಾಜ ಮುಖ್ಯ ವಾಹಿನಿಗೆ ಬರಬೇಕು. ಮುಂದಿನ ದಿನಗಳಲ್ಲಿ ಎಂ.ಎಲ್.ಎ. ಆಗಲು ಸಂಘಟನೆ ಮಾಡಬೇಕು ಎಂದು ಹೇಳಿದರು.
            ಚಿಕ್ಕಮಗಳೂರ ಜಿಲ್ಲೆ ಕಡೂರು ಸರ್ಕಾರಿ ಪದವಿಪೂರ್ವ ಕಾಲೇಜ ಕನ್ನಡ ಉಪನ್ಯಾಸಕ ಎಂ.ಓ.ಮಮತೇಶ ಅವರು ಉಪನ್ಯಾಸ ನೀಡಿದರು.
             ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ತಾ.ಪಂ.ಅಧ್ಯಕ್ಷ ಕರಿಯಪ್ಪ ಉಂಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಜು ಕೂಲೇರ, ಗ್ರೇಟ್-2 ತಹಶೀಲ್ದಾರ ಕುಂಬಾರ, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಸತೀಶ ಮಹೇಶ್ವರಪ್ಪ ಈಳಿಗೇರ, ಹಾವೇರಿ ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಎಂ.ಎಲ್.ಲಿಂಗರಾಜ, ವಸಂತ, ನಾಗರಾಜ ಬಸೇಗಣ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೃಷ್ಣಾ ಜವಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
             ಕಾರ್ಯಕ್ರಮದ ನಂತರ ಅಶೋಕ ಬಸ್ತಿ (ಅಭಿನವ ರಾಜಕುಮಾರ) ಅವರಿಂದ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಿದವು.
ಜಾಥಾ: ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆಗೆ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿ.ಪಂ.ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಜು ಕೂಲೇರ ಹಾಗೂ ಇತರರು ಹಾಜರಿದ್ದರು. ಆಕರ್ಷಕ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುರುಭವನ ತಲುಪಿತು.

Recent Articles

spot_img

Related Stories

Share via
Copy link
Powered by Social Snap