ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬಳ್ಳಾರಿ:

  ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವಕುಲಕ್ಕೆ ಮಾರ್ಗದರ್ಶಿಯಾಗಿದೆ. ಇವರು ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ದಲಿತರು, ಹಿಂದುಳಿದ ವರ್ಗಗಳ ಸಮುದಾಯವನ್ನು ಉನ್ನತಮಟ್ಟಕ್ಕೆ ಏರಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಇವರು ಸಲ್ಲಿಸಿದ ಸೇವೆ ಅನುಪಮ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಬಣ್ಣಿಸಿದರು.

   ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ನಿಮಿತ್ತ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಲಿತರ, ಹಿಂದುಳಿದ, ಸಮಾಜದ ಏಳಿಗೆಗೆ ಶ್ರಮಪಟ್ಟವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಇವರ ಕ್ರಾಂತಿ ಕೇವಲ ಕೇರಳ ರಾಜ್ಯಕ್ಕೆ ಮಾತ್ರ ಸೀಮಿತವಾಗದೇ ಇಡೀ ದಕ್ಷಿಣ ಭಾರತದಾದ್ಯಂತ ಪಸರಿಸಿತ್ತು ಎಂದು ತಮ್ಮ ಮಾತುಗಳಲ್ಲಿ ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಅಮರ. ಇಂದಿನ ಯುವಕರು ಸಹಾಯ ಮಾಡಿದ ವ್ಯಕ್ತಿಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಸಹಾಯ ಕೋರಿ ಬಂದವರಿಗೆ ಸಹಾಯ ಮಾಡಬೇಕು ಎಂದು ಹೇಳಿದ ಅವರು ಈಡಿಗ ಹಾಸ್ಟಲ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿ, ಊಟವನ್ನು ಕಲ್ಪಿಸಿ ಅವರ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ ಸಮುದಾಯದ ಮುಖಂಡರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

   ವಿಧಾನಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಅವರು ಮೂಲತ ಕೇರಳದವರಾಗಿದ್ದು, ಇವರು ಮೇಲು-ಕೀಳು, ಬಡವ-ಬಲ್ಲಿದ ಎಂಬ ತಾರತಮ್ಯವಿಲ್ಲದೇ ಎಲ್ಲರೂ ಒಂದೇ ಮಾನವಕುಲಕ್ಕೆ ಸೇರಿದವರೆಂದು ತಿಳಿದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಹಕ್ಕುಗಳನ್ನು ಶಾಂತಿರೀತಿಯ ಹೋರಾಟದ ಮೂಲಕ ದೊರಕಿಸಿಕೊಟ್ಟವರು ಎಂದರು.
ಬ್ರಹ್ಮಶ್ರೀ ನಾರಾಯಣ ಗುರು ಅವರ ಜೀವನ ಬಗ್ಗೆ ಆಕಾಶವಾಣಿ ಕಲಾವಿದರಾದ ಅಮಾತಿ ಬಸವರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲನಗೌಡ, ಶ್ರೀನಿವಾಸ ಮೋತುಕೋರ, ಆರ್ಯ ಈಡಿಗ ಗೌನ ಮಹಾಜನ ಸಭಾದ ಉಪಾಧ್ಯಕ್ಷ ಮೂಲ ಶ್ರೀನಿವಾಸುಲು, ಈಡಿಗ ಸಮಾಜದ ಮುಖಂಡರಾದ ಕೀರ್ತಿ ಕುಮಾರ್, ವಿಜಯ ಕುಮಾರ್, ಟಿ.ಸುಂಕಪ್ಪ, ಧನಂಜಯ, ಡಾ ಸತ್ಯವಾಣಿ ಮತ್ತಿತರರು ಇದ್ದರು.

   ಮೆರವಣಿಗೆ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಈಡಿಗ ಹಾಸ್ಟೆಲ್ ಮೈದಾನದಿಂದ ಆರಂಭವಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆಗೆ ಮಹಾನಗರ ಪಾಲಿಕೆಯ ಮಹಾಪೌರರಾದ ಆರ್.ಸುಶೀಲಬಾಯಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ, ಮಹಾನಗರ ಪಾಲಿಕೆಯ ಉಪಮೇಯರ್ ವಿ.ಲಕ್ಷ್ಮೀದೇವಿ, ಪಾಲಿಕೆ ಸದಸ್ಯ ವಿ.ನಾಗಮ್ಮ, ಆರ್ಯ ಈಡಿಗ ಗೌನ ಮಹಾಜನ ಸಭಾದ ಉಪಾಧ್ಯಕ್ಷ ಮೂಲ ಶ್ರೀನಿವಾಸುಲು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಮತ್ತು ಸಮಾಜದ ಮುಖಂಡರು, ಗಣ್ಯವ್ಯಕ್ತಿಗಳು ಹಾಗೂ ಮತ್ತಿತರರು ಇದ್ದರು.
ಮೆರವಣಿಗೆಯು ಈಡಿಗ ಹಾಸ್ಟೆಲ್‍ನಿಂದ ಪ್ರಾರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ರೇಲ್ವೆ ನಿಲ್ದಾಣದ ರಸ್ತೆ, ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು.

Recent Articles

spot_img

Related Stories

Share via
Copy link
Powered by Social Snap