ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ ನಿಧನ

ಮುಂಬೈ:

      ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ (77) ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಿಧನರಾದರು.

      1941 ಏ.1ರಂದು ಜನಿಸಿದ್ದ ಅಜಿತ್ ಲಕ್ಷ್ಮಣ್ ವಾಡೇಕರ್ 1971 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಜಯಗಳಿಸಿದ್ದ ಭಾರತ ತಂಡದ ನಾಯಕರಾಗಿದ್ದ ವಾಡೇಕರ್ ಭಾರತವನ್ನು 37 ಟೆಸ್ಟ್ ಮತ್ತು ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. 1974ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಇವರ ಕಡೆಯ ಪಂದ್ಯವಾಗಿತ್ತು.

      1966 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ವಾಡೇಕರ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಇವರು ಆಡಿದ ಒಟ್ಟೂ ಪಂದ್ಯಗಳಿಂದ 2113 ರನ್ ಕಲೆಹಾಕಿದ್ದರು.

      ಟೆಸ್ಟ್ ಆಟಗಾರ, ನಾಯಕ, ತರಬೇತುದಾರ ಮತ್ತು ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ವಾಡೇಕರ್ ಕೆಲಸ ಮಾಡಿದ್ದರು.
ವಾಡೇಕರ್ ಅವರ ಪ್ರತಿಭೆಯನ್ನು ಗೌರವಿಸಿ ಭಾರತ ಸರ್ಕಾರ ಅವರಿಗೆ 1972 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap