‘ಶಾಂತಿ ಸ್ಥಾಪನೆಗೆ ಒಂದು ಚಾನ್ಸ್ ಕೊಡಿ’ : ಅಂಗಲಾಚಿದ ಪಾಕ್!

ಇಸ್ಲಾಮಾಬಾದ್:

    ‘ಶಾಂತಿ ಸ್ಥಾಪನೆಗೆ ಒಂದು ಅವಕಾಶ ನೀಡಿ’ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. 

    ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನೀಡಿದರೆ ಪಾಕಿಸ್ತಾನ ತಕ್ಷಣವೇ ಸ್ಪಂಧಿಸುತ್ತದೆ. ಹಾಗೆಯೇ ಶಾಂತಿ ನೆಲೆಸಲು ಅವಕಾಶ ಮಾಡಿಕೊಟ್ಟರೆ ನನ್ನ ಮಾತಿಗೆ ನಾನು ಬದ್ಧನಾಗಿರುತ್ತೇನೆ ಎಂದು ಪಾಕ್ ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ.

      ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾಜಸ್ಥಾನದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಭಯೋತ್ಪಾದನೆ ನಡೆಸುವವರನ್ನು ಮತ್ತು ಇಂತಹ ದುಷ್ಕೃತ್ಯಕ್ಕೆ  ಬೆಂಬಲ ನೀಡುವವರಿಗೆ ಪಾಠ ಕಲಿಸಬೇಕು ಎನ್ನುವ ಆಗ್ರಹ ಎಲ್ಲ ಕಡೆ ಕೇಳಿಬರುತ್ತಿದೆ. ಭಾರತ ಈಗ ಬದಲಾಗುತ್ತಿದೆ. ಈ ಬಾರಿ ಉಗ್ರರು ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಮಯ ಬಂದಿದೆ. ಅನ್ಯಾಯವಾಗಿ ಸೈನಿಕರು ಬಲಿಯಾದ ನೋವನ್ನು ಮರೆಯಲು ಸಾಧ್ಯವೇ ಇಲ್ಲ. ಈ ಬಾರಿ ಎಲ್ಲ ಹಳೆಯ ಬಾಕಿಗಳನ್ನೂ ತೀರಿಸಲಾಗುವುದು, ಅಂತಿಮ ಜಯ ನಮ್ಮದೇ. ನೋವನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಭಯೋತ್ಪಾದನೆಯನ್ನು ಹೇಗೆ ಮಟ್ಟಹಾಕಬೇಕು ಎಂಬುದು ಚೆನ್ನಾಗಿ ಗೊತ್ತಿದೆ’ ಎಂದು ಸಾರಿದ್ದರು. 

      ಪ್ರಧಾನಿ ಮೋದಿ ಹೇಳಿಕೆ ಹೊರಬಿದ್ದ ಮರುದಿನವೇ, ತಾವು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ. ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ” ಎಂದು ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap