ಶಾಲಾ ಆವರಣದಲ್ಲಿಯೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಖಂಡ್ :
 
                 ಡೆಹ್ರಾಡೂನ್ ನ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸರ್ಕಾರ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತಂದು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆಯನ್ನೂ ಜಾರಿಗೆ ತಂದಿದೆ. ಆದರೂ ನಮ್ಮ ದೇಶದಲ್ಲಿ ಕಾಮುಕರಿಂದ  ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳು ಮರುಕಳಿಸುತ್ತಲೇ ಇವೆ.
                     
                   ಅದೇ ಶಾಲೆಯ ಐವರು ಸಿಬ್ಬಂದಿ ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅದರಲ್ಲಿ ನಾಲ್ಕು ಜನರನ್ನು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಕಳೆದ ತಿಂಗಳೇ ಈ ಘಟನೆ ನಡೆದಿದೆ.ಆದರೆ ಶಾಲೆಯ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು  ಈ ವಿಚಾರದ ಬಗ್ಗೆ ಶಾಲೆಯ ಆಡಳಿತ ಮಂಡಳಿ ಎಲ್ಲೂ ಗುಟ್ಟುಬಿಟ್ಟು ಕೊಟ್ಟಿಲ್ಲ ಎಂದು ತಿಳಿದು ಬಂದಿದೆ. ತಡವಾಗಿಯಾದರು ವಿಷಯ ಹೊರಗಡೆ ಬಂದಿದೆ ಎಂದು ಉತ್ತರ ಖಂಡ್  ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಟುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ . ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ ಮತ್ತು ಬಾಲಕಿಗೆ ಸೂಕ್ತ ನ್ಯಾಯ ಒದಗಿಸಿ ಕೊಡುವುದಾಗಿಯೂ ತಿಳಿಸಿದ್ದಾರೆ.
    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap