ಶಿರಾಡಿ ಘಾಟ್ನಲ್ಲಿ ಮತ್ತೆ ವಾಹನ ಸಂಚಾರ ಬಂದ್?

ಬೆಂಗಳೂರು,:

ಮಳೆ ಗುಡ್ಡ ಕುಸಿತದಿಂದಾಗಿ ಶಿರಾಡಿ ಘಾಟ್ ರಸ್ತೆ ಹಾಳಾಗಿದೆ. ಮುಂದಿನ 3 ರಿಂದ 4 ತಿಂಗಳುಗಳ ಕಾಲ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣವಾದ ಬಳಿಕ ಜೋರು ಮಳೆಯಾಗಿದೆ. ಅನೇಕ ಕಡೆಗಳಲ್ಲಿ ಗುಡ್ಡ ಕುಸಿದಿದೆ. ಆದ್ದರಿಂದ, ಶಿರಾಡಿ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ಕಷ್ಟ’ ಎಂದರು.
ಭಾರೀ ಮಳೆ: ರಸ್ತೆ ಮೂಲಕ ಕರಾವಳಿ ಕಡೆ ಪ್ರಯಾಣಿಸುವವರಿಗೆ ಮಹತ್ವದ ಟಿಪ್ಸ್ ‘ಮುಂದಿನ 3 ರಿಂದ 4 ತಿಂಗಳ ಕಾಲ ಭಾರಿ ವಾಹನಗಳ ಸಂಚಾರ ಕಷ್ಟ. ಆದ್ದರಿಂದ, ವಾಹನ ಸಂಚಾರ ನಿಷೇಧಿಸುವ ಪ್ರಸ್ತಾಪವಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

Recent Articles

spot_img

Related Stories

Share via
Copy link
Powered by Social Snap