ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಚಾಂಪಿಯನ್ ಶಿಪ್

ಹೊನ್ನಾಳಿ 

    ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಚದುರಂಗ ಪಂದ್ಯಾವಳಿಯಲ್ಲಿ ಮಹಿಳೆಯರ ವಿಭಾಗದಲ್ಲಿ 2018-19 ಸಾಲಿನ ಚಾಂಪಿಯನ್ ಸ್ಥಾನವನ್ನು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಲಭಿಸಿದೆ.

    ಕ್ರೀಡೆಯಲ್ಲಿ ಶ್ರಮ, ಶ್ರದ್ದೆ, ಆಸಕ್ತಿಯಿಂದ ನಮ್ಮನ್ನು ನಾವು ತೊಡಗಿಸಿಕೊಂಡರೆ ಯಾವುದೇ ಕ್ರೀಡೆಯಲ್ಲಿ ಯಶಸ್ಸು ಸಾಧಿಸಲು ಮತ್ತು ಸಾಧನೆ ಮಾಡಲು ಸಾಧ್ಯ ಎಂದು ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್‍ರಾದ ಎನ್.ಸಿ. ಕಾಡದೇವರ ಹೇಳಿದರು.

    ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಚದುರಂಗ ಪಂದ್ಯಾವಳಿ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

    ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎಂ.ಕೆ. ದಾನಪ್ಪ ಮಾತನಾಡಿ ಓದಿನಷ್ಟೇ ಮಹತ್ವ ಕ್ರೀಡೆಗೂ ನೀಡಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗುತ್ತದೆ. ಕ್ರೀಡಾಪಟುಗಳು ತೀರ್ಪುಗಾರರ ತೀರ್ಪನ್ನು ಗೌರವಿಸುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದು ಹೇಳಿದರು.

   ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ, ದ್ವೀತಿಯ ಸ್ಥಾನ ಎ.ವಿ.ಕೆ. ಕಾಲೇಜು, ದಾವಣಗೆರೆ, ತೃತಿಯ ಸ್ಥಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ, ನಾಲ್ಕನೇ ಸ್ಥಾನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ

    ಪುರುಷ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ, ದ್ವೀತಿಯ ಸ್ಥಾನ ಎಸ್.ಆರ್.ಎಸ್. ಕಾಲೇಜು, ಚಿತ್ರದುರ್ಗ. ತೃತಿಯ ಸ್ಥಾನ ಬಾಪೂಜಿ ಹೈಟೆಕ್ ಕಾಲೇಜು, ದಾವಣಗೆರೆ, ನಾಲ್ಕನೇ ಸ್ಥಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಿವಬಸಪ್ಪ ಹೆಚ್ ಯತ್ತಿನಹಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾದ ಹೊನ್ನಾಳಿ ರಾಷ್ಟ್ರೀಯ ಚದುರಂಗ ಆಟಗಾರ ಹಾಲೇಶ್ವರಯ್ಯ, ಸಹ ಪ್ರಾಧ್ಯಾಪಕರಾದ ದೇವರಾಜ ಸಿ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗೇಂದ್ರನಾಯ್ಕ, ಸಹಾಯಕ ಪ್ರಾಧ್ಯಾಪಕರಾದ ಡಾ. ಎ.ಎಲ್. ಪಾರ್ಥಸಾರಥಿ, ಬೆಳ್ಳುಳ್ಳಿ ಕೊಟ್ರೇಶ, ಅರಸಯ್ಯ, ವಿ.ಜಿ.ಮಂಜುನಾಥ ಗುರು, ಆರ್. ಹೆಚ್. ಅಮೂಲ್ಯ, ಸಹಾಯಕ ಪ್ರಾಧ್ಯಾಪಕಿ ಹೆಚ್. ಕೆ. ಶೈಲಜಾ ಪ್ರಾರ್ಥಿಸಿದರು, ಸಹಾಯಕ ಪ್ರಾಧ್ಯಾಪಕರಾದ ಎಂ.ಆರ್. ಲೋಕೇಶ ಸ್ವಾಗತಿಸಿದರು, ಗ್ರಂಥಪಾಲಕರಾದ ಎಂ. ನಾಗರಾಜ ನಾಯ್ಕ ನಿರೂಪಿಸಿದರು, ದೈಹಿಕ ಶಿಕ್ಷಣ ನಿರ್ದೇಶಕರಾದ ಪಿ.ಎಸ್. ಹರೀಶ ವಂದಿಸಿದರು ಮತ್ತು ವಿವಿಧ ಕಾಲೇಜುಗಳಿಂದ ಆಗಮಿಸಿದ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

                    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap