ಸುಳ್ಳು ಅಪಪ್ರಚಾರವೇ ಭಾರತೀಯ ಜನತಾ ಪಕ್ಷದ ಪ್ರಥಮ ಅಸ್ತ್ರ

ಚಳ್ಳಕೆರೆ

                ಕಳೆದ ನೂರಾರು ವರ್ಷಗಳಿಂದ ರಾಜ್ಯ ಹಾಗೂ ರಾಷ್ಟ್ರದ ಬಡ ಜನರ, ಶೋಷಿತ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿರುವುದು ಕಾಂಗ್ರೆಸ್ ಪಕ್ಷ, ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಗರೀಬಿ ಹಠಾವೋ ಅಂದೋಲನ ಬಡ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಫಲವಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ತಾನೇ ರಾಷ್ಟ್ರದ ಪ್ರಖ್ಯಾತ ಕೈಗಾರಿಕೋದ್ಯಮಿಗಳ 3 ಲಕ್ಷ ಕೋಟಿ ಸಾಲವನ್ನು ಪ್ರಧಾನ ಮಂತ್ರಿಗಳು ಮನ್ನಾ ಮಾಡಿ ಅ ಮೂಲಕ ಸುಮಾರು 70 ಸಾವಿರ ಕೋಟಿ ಕಮಿಷನ್ ಪಡೆದಿದ್ದಾರೆವೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಆರೋಪಿಸಿದರು.

                 ಅವರು, ಕೆಪಿಸಿಸಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಚಳ್ಳಕೆರೆ ನಗರಕ್ಕೆ ಆಗಮಿಸಿ ನಗರಸಭೆಯ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ನೆಹರೂ ವೃತ್ತದಲ್ಲಿ ನೆಹರೂ, ಶ್ರೀವಾಲ್ಮೀಕಿ, ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಹಿಂದೆಂದೂ ಕಂಡರ್ಯದ ಬರಗಾಲ ನಮ್ಮನ್ನು ಕಾಡುತ್ತಿದೆ. ಇತ್ತೀಚೆಗೆ ತಾನೇ ಕೊಡಗು ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಭೂ ಕುಸಿತ ಉಂಟಾಗಿ ಅಲ್ಲಿನ ಜನತೆ ಸಂಕಷ್ಟಕ್ಕೆ ಒಳಗಾಗಿದ್ಧಾರೆ. ರಾಜ್ಯದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಮೈತ್ರಿ ಸರ್ಕಾರ ಸಕರಾತ್ಮಕ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ಈ ಬಗ್ಗೆ ಬಿಜೆಪಿ ಪಕ್ಷದ ಕೇಂದ್ರ ಸಚಿವರಾಗಲಿ, ಲೋಕಸಭಾ ಸದಸ್ಯರಾಗಲಿ ಪ್ರಧಾನ ಮಂತ್ರಿಗೆ ಇಲ್ಲಿನ ರೈತರ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಕೇವಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಸುಳ್ಳು ಪ್ರಚಾರಗಳಿಂದ ಟೀಕಿಸುವುದೇ ಇವರ ಪ್ರಮುಖ ಕಾರ್ಯವಾಗಿದೆ. ಆದರೆ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರಮೋದಿ ಮಾತ್ರ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಲೇ ಇದ್ಧಾರೆ. ಇವರ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ರಾಷ್ಟ್ರದ ಯಾವುದೇ ಸಮುದಾಯಕ್ಕೂ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲವೆಂದು ಆರೋಪಿಸಿದರು.

                     ಈ ಬಗ್ಗೆ ಸೂಕ್ತ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ. ಭಾರತೀಯ ಜನತಾ ಪಕ್ಷ ಎಂದಿಗೂ ಬಡ, ಶೋಷಿತ ಹಿಂದುಳಿದ ಸಮುದಾಯಗಳ ರಕ್ಷಣೆಗೆ ಮುಂದಾಗಿಲ್ಲ. ರಾಜ್ಯದ ಜನತೆಯ ಸಂಕಷ್ಟಗಳಿಗೆ ಹೆಚ್ಚು ಸಂಖ್ಯೆಯ ಲೋಕಸಭಾ ಸದಸ್ಯರಿದ್ದರೂ ಯಾವುದೇ ಸ್ಪಂದನವಿಲ್ಲ. ಕಳೆದ ಅವಧಿಯ ನಿರ್ಗಮನ ಮುಖ್ಯಮಂತ್ರಿ ಸಿದ್ದರಾಮಯ್ಯನ ಸರ್ಕಾರ ಹಿಂದೆಂದೂ ಕಾಣದಂತಹ ಅಭೂತ ಪೂರ್ವವಾದ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿದೆ. ವಿಶೇಷವಾಗಿ ಶಾಸಕ ಟಿ.ರಘುಮೂರ್ತಿ ತಮ್ಮದೇಯಾದ ವಿಶೇಷ ಪ್ರಯತ್ನದಿಂದ ತಮ್ಮ ಕ್ಷೇತ್ರಕ್ಕೆ 3 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಂಡಿದ್ಧಾರೆ. ನಗರಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ ನಗರಸಭಾ ಆಡಳಿತವನ್ನು ರಘುಮೂರ್ತಿ ಕೈಗೆ ಕೊಟ್ಟರೆ ಈ ನಗರವನ್ನು ಮಾದರಿ ನಗರವನ್ನಾಗಿ ಮಾಡುತ್ತಾರೆ. ಜಿಲ್ಲೆ ಏಕೈಕ ಕಾಂಗ್ರೆಸ್ ಪಕ್ಷದ ಶಾಸಕರಾದ ಟಿ.ರಘುಮೂರ್ತಿಯವರಿಗೆ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜವಾಬ್ದಾರಿ ನೀಡುವಂತೆ ನಾನು ಸಹ ರಾಜ್ಯದ ಮುಖಂಡರನ್ನು ಒತ್ತಾಯಿಸುತ್ತೇನೆ. ಅವರು, ಯಾವುದೇ ಜವಾಬ್ದಾರಿ ನೀಡಿದರೂ ಸಹ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸ ನಮಗೆ ಇದೆ ಎಂದರು.

                    ನಾನು ಕಳೆದ ಹತ್ತು ವರ್ಷಗಳ ಹಿಂದೆ ಚಳ್ಳಕೆರೆ ಪಟ್ಟಣಕ್ಕೆ ಆಗಮಿಸಿದ್ದು, ಈಗ ನಗರಸಭೆಯಾಗಿ ಮಾರ್ಪಾಡಾಗಿದೆ. ಎಲ್ಲಾ ರಸ್ತೆಗಳು ವಿಶಾಲವಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಭಿವೃದ್ಧಿ ಪಡೆದ ನಗರದ ಸಾಲಿಗೆ ಚಳ್ಳಕೆರೆ ಸೇರ್ಪಡೆಯಾಗಿದೆ. ನಿಮ್ಮೆಲ್ಲರ ಸಹಕಾರ ಅಭಿಮಾನದಿಂದ ಶಾಸಕ ರಘುಮೂರ್ತಿ ಈ ಕಾರ್ಯವನ್ನು ಮಾಡಿದ್ಧಾರೆ. ಮುಂದಿನ ದಿನಗಳಲ್ಲೂ ಸಹ ನಿಮ್ಮ ಶುಭ ಹಾರೈಕೆ ಇವರ ಮೇಲೆ ಇರಲಿ ಎಂದರು.

                  ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ ಮಾತನಾಡಿ, ಬೇರೆ ಎಲ್ಲಾ ಕ್ಷೇತ್ರಗಳಿಗೆ ಹೋಲಿಸಿದಲ್ಲಿ ಚಳ್ಳಕೆರೆ ಕ್ಷೇತ್ರ ಅತಿ ಹೆಚ್ಚು ಅಭಿವೃದ್ಧಿ ಪಡೆದ ಕ್ಷೇತ್ರವಾಗಿದೆ. ಇಲ್ಲಿನ ಜನತೆಗೆ ಶಾಸಕ ಟಿ.ರಘುಮೂರ್ತಿಯವರ ಸಾಮಥ್ರ್ಯ ಮತ್ತು ಮುಂದಾಲೋಚನೆಯ ಅರಿವು ಹೆಚ್ಚಾಗಿದೆ. ಇಲ್ಲಿನ ಅಭಿವೃದ್ಧಿಗೆ ಒತ್ತು ನೀಡುವ ಸದಾಕಾಲ ನಗರ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸುವ ಟಿ.ರಘುಮೂರ್ತಿಯವರ ಶಕ್ತಿಯನ್ನು ಹೆಚ್ಚಿಸಲು ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.

                     ಶಾಸಕ ಟಿ.ರಘುಮೂರ್ತಿ ಮಾತನಾಡಿ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ನಂತರ ದಿನೇಶ್‍ಗುಂಡೂರಾವ್ ಚಳ್ಳಕೆರೆ ನಗರಕ್ಕೆ ಆಗಮಿಸಿದ್ದು ಸಂತಸ ತಂದಿದೆ. ನಗರಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಬೇಕು ಎಂಬ ಉದ್ದೇಶದಿಂದ ಅವರು ಇಲ್ಲಿಗೆ ಬಂದಿದ್ದು ಅವರ ಉದ್ದೇಶವನ್ನು ಮತದಾರರು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ತಾವೆಲ್ಲರೂ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ನಮ್ಮ ಎಲ್ಲಾ 30 ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಈಗಾಗಲೇ 19ನೇ ವಾರ್ಡ್‍ನಲ್ಲಿ ಗೆಲುವು ತಂದುಕೊಟ್ಟಿದ್ದೀರಿ, ನನ್ನನ್ನು ಎರಡನೇ ಬಾರಿಗೆ ಆಯ್ಕೆ ಮಾಡಿ ನಿಮ್ಮ ವಿಶ್ವಾಸಕ್ಕೆ ಅಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತೇನೆ. ಪಕ್ಷವು ನೀಡುವ ಯಾವುದೇ ಜವಾಬ್ದಾರಿಯನ್ನು ನಾನು ನಿರ್ವಹಿಸಲು ಸಿದ್ದನಿದ್ದೇನೆ. ನಿಮ್ಮಲ್ಲರ ಸಹಕಾರ ನನಗೆ ಶ್ರೀರಕ್ಷೆಯಾಗಲಿ ಎಂದರು.

                    ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ವಿ.ವೆಂಕಟೇಶ್, ಮಂಜುನಾಥ, ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಪ್ಯಾತರಾಜನ್, ಮಾಜಿ ಶಾಸಕ ಶಿವಮೂರ್ತಿನಾಯ್ಕ, ನಗರಸಭೆಯ ಎಲ್ಲಾ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಕಿರಣ್‍ಶಂಕರ್, ಟಿ.ಪ್ರಭುದೇವ್, ವೀರಭದ್ರಬಾಬು ಮುಂತಾದವರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap