ಸ್ವತಂತ್ರೋತ್ಸವದ ದಿನ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಸೂಚಿಯ ನೀಲಿನಕ್ಷೆಯ ಅನಾವರಣ

ಬೆಂಗಳೂರು: 

      ಸಮ್ಮಿಶ್ರ ಸರ್ಕಾರದ ಐದು ವರ್ಷಗಳ ಕಾರ್ಯಸೂಚಿಯನ್ನು ಇಂದು ಸ್ವಾತಂತ್ರಯೋತ್ಸವದ ದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತೆರೆದಿಟ್ಟರು.

      ಮಾಣಿಕ್ ಶಾ ಪೆರೆಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸರ್ಕಾರವು ರಾಜ್ಯದ ಸರ್ವತೋಮುಖ ಅಭವೃದ್ಧಿಗೆ ಬದ್ಧವಾಗಿದೆ ಎಂದ ಅವರು, ಸರ್ಕಾರ ಮಾಡಲಿಚ್ಛಿಸಿರುವ ಯೋಜನೆಗಳ ನೀಲಿ ನಕ್ಷೆಯನ್ನು ಜನರೊಂದಿಗೆ ಹಂಚಿಕೊಂಡರು.

      ನಾವು ಈಗಾಗಲೇ ರೈತರ ಸಾಲಮನ್ನಾ ಮಾಡಿದ್ದೇವೆ, ಜೊತೆಗೆ ಇಸ್ರೇಲ್ ಮಾದರಿ ಕೃಷಿಯನ್ನು ಕರ್ನಾಟಕದಲ್ಲಿ ಪರಿಚಯಿಸಿ ರೈತರನ್ನು ಸ್ವಾಲಂಬಿಯನ್ನಾಗಿ ಮಾಡಲು ಪ್ರಯತ್ನಗಳು ಈಗಾಗಲೇ ಶುರುವಾಗಿದೆ ಎಂದು ಅವರು ಹೇಳಿದರು.

      ಶಿಕ್ಷಣ, ಆರೋಗ್ಯ, ವ್ಯವಸಾಯ, ಮಾಹಿತಿ ತಂತ್ರಜ್ಞಾನ, ಮೂಲಭೂತ ಅಭಿವೃದ್ಧಿ, ಅಲ್ಪಸಂಖ್ಯಾತ ಅಭಿವೃದ್ಧಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ಈಗಾಗಲೇ ಕೈಗೊಂಡಿರುವ ಯೋಜನೆಗಳು ಮತ್ತು ಮುಂಬರಲಿರುವ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು.

      ‘ರಾಷ್ಟ್ರದ ಪ್ರಗತಿಯ ನಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿರಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷೆ. ಜೊತೆಗೆ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಎಲ್ಲ ಜಿಲ್ಲೆಗಳು ಅತ್ಯುತ್ತಮ ಸ್ಥಾನ ಪಡೆಯಬೇಕು. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡ, ಮೂಲಸೌಕರ್ಯ, ವೃದ್ಧಿ ಮಾತ್ರವಲ್ಲ. ಎಲ್ಲರಿಗೂ ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆ ನಮ್ಮ ಸರ್ಕಾರದ ಮಾನದಂಡಗಳು’ ಎಂದು ತಿಳಿಸಿದರು.

      ‘ಅಖಂಡ ಕರ್ನಾಟಕದ ಅಸ್ಮಿತೆಗೆ ಕಿಂಚಿತ್ತೂ ಭಂಗವಾಗದಂತೆ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ. ಹಿಂದಿನ ಸರ್ಕಾರ ಹಾಗೂ ಮೈತ್ರಿ ಸರ್ಕಾರ ಮಂಡಿಸಿರುವ ಬಜೆಟ್‌ಗಳು ಇದಕ್ಕೆ ಪೂರಕವಾಗಿವೆ. ಇವೆರಡರ ಅನುಷ್ಠಾನಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದೆ’ ಎಂದು ಸ್ಪಷ್ಟಪಡಿಸಿದರು.

     ‘ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭಿಸಿದ ಹಾಗೂ ಸುವರ್ಣಸೌಧ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ ತೃಪ್ತಿ ನನಗಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದೂ ಬೆಳಗಾವಿಯಿಂದಲೇ. ನನ್ನ 47 ಗ್ರಾಮ ವಾಸ್ತವ್ಯಗಳಲ್ಲಿ 27 ಉತ್ತರ ಕರ್ನಾಟಕದಲ್ಲೇ ನಡೆದಿವೆ. ನನ್ನ ಅಭಿಮಾನದ ಬೆಳಗಾವಿಗೆ ಸರ್ಕಾರದ ಕೆಲವು ಇಲಾಖೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುತ್ತೇನೆ. ಗಡಿಭಾಗದ ಕನ್ನಡಿಗರ ಹಿತರಕ್ಷಣೆಗಾಗಿ ನೆರೆರಾಜ್ಯದ ಸರ್ಕಾರಗಳ ಜೊತೆ ಸೌಹಾರ್ದಯುತ ಚರ್ಚೆ ನಡೆಸುತ್ತೇನೆ’ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap