ಕರಾವಳಿ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ

0
72

ಬೆಂಗಳೂರು:

   ಕರಾವಳಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ  ಮುಂದುವರೆದಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ನೇತ್ರಾವತಿ, ಸಿತಾ, ಕುಮಾರದ್ವಾರ, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.

      ಉಡುಪಿಯಲ್ಲಿ ನಿನ್ನೆ ರಾತ್ರಿ ಸ್ವಲ್ಪ ತಗ್ಗಿದ ಮಳೆ ಇಂದು ಮತ್ತೆ ಮರುಕಳಿಸಿದೆ. ಕಾರ್ಕಳ, ಕುಂದಾಪುರ, ಹೆಬ್ರಿ, ಸುತ್ತಮುತ್ತಲಿನ ಪ್ರದೇಶಗಳು ನೀರಿನಿಂದ ಆವರಿಸಿವೆ, ಕರಾವಳಿ ತೀರದಲ್ಲಿ ಗಂಟೆಗೆ 45 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭೂಕುಸಿತದ ವರದಿಯಿಂದಾಗಿ ಆಗುಂಬೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

      ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ರದ್ದುಗೊಳಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ. ಬೈಂದೂರು ಠಾಣೆ ವ್ಯಾಪ್ತಿಯಲ್ಲಿ ದೇವಾಲಯದ ಗೋಡೆ ಕುಸಿದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದಾಗ್ಯೂ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯಕ್ಕೆ ರೈತರು ಸಿದ್ದತೆಯಲ್ಲಿ ತೊಡಗಿದ್ದಾರೆ.
 

LEAVE A REPLY

Please enter your comment!
Please enter your name here