ಮಕ್ಕಳಲ್ಲಿನ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಸಹಕಾರಿ

0
29

ಹೊನ್ನಾಳಿ:

      ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಸಹಕಾರಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

      ತಾಲೂಕಿನ ಹೊಳೆ ಅರಳಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ ಜಾರಿಗೆ ಬಂದ ಮೇಲೆ ಅನೇಕ ಪ್ರತಿಭೆಗಳು ಹೊರ ಬರುತ್ತಿವೆ. ಎಲ್ಲಾ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

      ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಸ್ಪರ್ಧೆಗಳು ಪೂರಕವಾಗಿ ಕೆಲಸ ಮಾಡುತ್ತವೆ. ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅದು ಅನಾವರಣಗೊಳ್ಳಲು ಸಹಕಾರ ನೀಡಬೇಕು ಎಂದು ತಿಳಿಸಿದರು.

      ಪಠ್ಯ ವಿಷಯಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಪಾಲ್ಗೊಂಡರೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ದೈಹಿಕ ಸದೃಢತೆ ಜತೆಗೆ ಮಾನಸಿಕ ಬೆಳವಣಿಗೆಯೂ ಆಗುತ್ತದೆ ಎಂದು ಹೇಳಿದರು.

      ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ದೇಶಭಕ್ತಿ ಗೀತೆ, ಜಾನಪದ ಗೀತೆ, ಭಾವಗೀತೆ, ಸಮೂಹ ಗೀತೆ, ಛದ್ಮವೇಷ, ಕಿರು ನಾಟಕ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಅನೇಕ ಸ್ಪರ್ಧೆಗಳು ಸೇರಿದ್ದು, ಎಲ್ಲಾ ಸ್ಪರ್ಧೆಗಳಿಗೆ ಮಕ್ಕಳು ಸೂಕ್ತ ತಯಾರಿ ನಡೆಸಿದರೆ ಅನುಕೂಲವಾಗುತ್ತದೆ. ಇದಕ್ಕೆ ಶಿಕ್ಷಕರು ಸಮರ್ಪಕ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

      ಶಾಲಾ ಮುಖ್ಯ ಶಿಕ್ಷಕಿ ರತ್ನಮ್ಮ, ಎಲ್ಲಾ ಸಹ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷ ಫಕ್ಕೀರಪ್ಪ, ಎಲ್ಲಾ ಸದಸ್ಯರು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಇದ್ದರು.

LEAVE A REPLY

Please enter your comment!
Please enter your name here