ಮೋಟಾರ್ ವಾಹನ ತಿದ್ದುಪಡಿ ಮಸೂದೆ ವಾಪಸ್ ಗೆ ಆಗ್ರಹಿಸಿ ಮುಷ್ಕರ

0
73

ಬೆಂಗಳೂರು,

ಮೋಟಾರ್ ವಾಹನ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯಬೇಕೆಂದು 2017ನ್ನು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಮಂಗಳವಾರ ಕೇಂದ್ರ ಕಾರ್ಮಿಕ ಸಂಘಟನೆಗಳು ರಾಷ್ಟ್ರ ವ್ಯಾಪಿ ಮುಷ್ಕರ ನಡೆಸಲಿವೆ ರಸ್ತೆ ಸಾರಿಗೆ ಕ್ಷೇತ್ರದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆಯು ಈ ಪ್ರತಿಭಟನೆಗೆ ಕರೆ ನೀಡಿದ್ದು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಸಂಪೂರ್ಣ ಬಂದ್ ನಡೆಸಲು ತೀರ್ಮಾನಿಸಲಾಗಿದೆ.

   ನಗರದ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯುನ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ (ತಿದ್ದುಪಡಿ) ಮಸೂದೆ- 2017 ಚಾಲಕರ ಮತ್ತು ಜನ ವಿರೋಧಿ ಮಸೂದೆಯಾಗಿದೆ ಮಸೂದ್ನೆ ಹಿಂಪಡೆಯುವಂತೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಒಂದು ವೇಳೆ ಈ ಮಸೂದೆ ಜಾರಿಯಾದರೆ ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇರೋದಿಲ್ಲ, ಬದಲಿಗೆ ಕೇಂದ್ರಿಕರಿಸುವ ಕೆಲಸ ನಡೆಯುತ್ತಿದೆ ಎಂಬುದು ಮಾಲೀಕರ ವಾದವಾಗಿದೆ. ಈ ಮುಷ್ಕರಕ್ಕೆ ಕೆ ಎಸ್ ಆರ್ ಟಿ ಸಿ ನೌಕರರ ಫೆಡರೇಶನ್, ಒಟಿಯು ಚಾಲಕರು ಮತ್ತು ಮಾಲೀಕರ ಸಂಘ, ಎಆರ್ ಡಿ ಯು ಸಂಘ, ಏರ್ಪೋಟ್ ಟ್ಯಾಕ್ಸಿ ಚಾಲಕರ ಸಂಘ, ಪೀಸ್ ಆಟೋ, ಕೆಎಸ್‍ಆರ್‍ಟಿಸಿ ಎಸ್ ಸಿ/ ಎಸ್ ಟಿ ನೌಕರರ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಒಗ್ಗೂಡಿವೆ.

   ಮಸೂದೆಯಲ್ಲಿ ಏನಿದೆ ಈ ಕಾಯ್ದೆಯ ಅನ್ವಯ ವಾಹನದ ನೋಂದಣಿಯಿಂದ ಹಿಡಿದು ಪ್ರತಿಯೊಂದಕ್ಕೂ ಏಜೆನ್ಸಿಯವರನ್ನೇ ಅವಲಂಬಿಸಬೇಕಾಲಿದ್ದು ರಾಜ್ಯಗಳ ಅಧಿಕಾರ ಮೊಟಕುಗೊಳ್ಳಲಿದೆ. ಅಂದರೆ ವಾಹನಗಳ ಪರ್ಮಿಟ್ ನೀಡುವಿಕೆ, ರಾಜ್ಯಗಳ ಸಾರಿಗೆ ನೀತಿ ನಿರೂಪಣೆ, ತೆರಿಗೆ ಸಂಗ್ರಹ ಮುಂತಾದ ವಿಷಯಗಳಲ್ಲಿ ರಾಜ್ಯಗಳ ಅಧಿಕಾರವೇ ಇರುವುದದಿಲ್ಲ. ಈಗ ರಾಜ್ಯಗಳ ಕೈಯಲ್ಲಿರುವ ಅಂತಾರಾಜ್ಯ ಪರ್ಮಿಟ್ ನೀಡುವ ಅಧಿಕಾರ ಪೂರ್ಣವಾಗಿ ಕೇಂದ್ರ ಸರ್ಕಾರದ ಪಾಲಾಗಲಿದೆ.ಸ್ಟೇಜ್ ಪರ್ಮಿಟ್ ಮತ್ತು ಕಾಂಟ್ರಾಕ್ಟ್ ಪರ್ಮಿಟ್ ಗಳ ಬದಲಿಗೆ ಒಂದೇ ಪರ್ಮಿಟ್ ಬರಲಿದ್ದು, ಲಾಸ್ಟ್ ಮೈಲ್ ಕನೆಕ್ಟಿವಿಟಿ ಹೆಸರಲ್ಲಿ ಖಾಸಗಿ ವಾಹನಗಳಿಗೆ ಪರ್ಮಿಟ್ ಇಲ್ಲದೆ ಓಡಿಸುವ ಅವಕಾಶ ಸಿಗಲಿದೆ. ಈ ಮಸೂದೆಯಿಂದಾಗಿ, ಬಿಡಿ ಭಾಗಗಳ ವ್ಯಾಪಾರಿಗಳು, ರಸ್ತೆ ಬದಿಯ ಸಣ್ಣ ಪುಟ್ಟ ವರ್ಕ್ ಶಾಪ್‍ಗಳು, ರಿಪೇರಿ ಕೆಲಸಗಾರರು ಕೆಲಸಗಳನ್ನು ಕಳೆದುಕೊಳ್ಳುವ ಆತಂಕ ಇದೆ.ಮತ್ತೊಂದೆಡೆ ನಾಳೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ, ಮುಷ್ಕರದಲ್ಲಿ ಭಾಗಿಯಾಗುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಕೆಎಸ್‍ಆರ್‍ಟಿಸಿ ಎಚ್ಚರಿಕೆ ನೀಡಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮತ್ತು ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here