ವಿದ್ಯಾರ್ಥಿನಿಯನ್ನು ಅಪಹರಿಸಿ ಕೊಲೆಗೈದುದ್ದನ್ನು ಖಂಡಿಸಿ, ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ

0
56

ರಾಣಿಬೆನ್ನೂರ :

ಹಾವೇರಿ ನಗರದ ಜಿ.ಹೆಚ್. ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯನ್ನು ಆ.06 ರಂದು ಅಪಹರಿಸಿ ಕೊಲೆ ಮಾಡಿರುವುದನ್ನು ಖಂಡಿಸಿ, ಶನಿವಾರ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ ರಾಮಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.


ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆಯ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಇಲ್ಲಿನ ಬಸ್ ನಿಲ್ದಾಣದ ಎದರು ರಸ್ತೆ ತಡೆ ನಡೆಸಿ ಮಾನವ ಸರಪಳಿ ನಿರ್ಮಸಿ ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನೆ ನಡೆಸಿದರು.
ಸಮಾಜದಲ್ಲಿ ಮಾನವೀಯತೆಗೆ ದಕ್ಕೆಬರುವಹಾಗೆ ಪದೆ ಪದೇ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಬಂಧಿಸಿದ ಇಲಾಖೆ ವಿಫಲವಾಗಿದೆ, ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಸಮಾಜದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಬೇಕು, ಮಹಿಳೆಯರಿಗೆ ಹೆಚ್ಚು ರಕ್ಷಣೆ ಒದಗಿಸುವಂತೆ ಕಾನೂನು ರೂಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಶ್ರೀಕಾಂತ ಬಾವಿಹಳ್ಳಿ, ಮಮತಾ ಜಾದವ, ಸೌರಬ್ ಜೋಶಿ, ರಾಜು ತಳವಾರ, ಸುಮಂತ್, ಬಸವರಾಜ ಕುರವತ್ತಿ, ನಯನಾ, ಪಲ್ಲವಿ, ಚೈತ್ರಾ, ಸಿದ್ದೇಶ ಗುಂಡೇರ, ಹರ್ಷಎ.ಜಿ, ಚಂದ್ರಪ್ಪ ಹಲವಾಗಲ ಸೇರಿದಂತೆ ವಿವಿಧ ಶಾಲೆ ಕಾಲೇಜಗಳ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here