ಒಲ್ಲದ ಮನಸ್ಸಿನಿಂದ ಜೈಶ್ ಕಛೇರಿ ವಶಕ್ಕೆ ಪಡೆದ ಪಾಕ್ ಸರ್ಕಾರ…!!!!

ಇಸ್ಲಾಮಾಬಾದ್:
 
       ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚಾದ ಕಾರಣ ಪಾಕಿಸ್ತಾನ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶ ಪಡಿಸಿಕೊಂಡಿದೆ.
       ಜೈಶ್ ಉಗ್ರರ ಕೃತ್ಯಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾದ ಮಾರನೇ ದಿನವೇ  ಪಂಜಾಬ್ ಪ್ರಾಂತ್ಯದ ಬಹಾವಲ್​ಪುರ್​ದಲ್ಲಿರುವ ಜೈಶ್ ಸಂಘಟನೆಯ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ .
        ಜೆಇಎಂ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ವಶಕ್ಕೆ ಪಡೆದಿದೆ ಎಂದು ಪಾಕಿಸ್ತಾನ ಮಾಹಿತಿ ಸಚಿವ ಫವದ್ ಚೌಧರಿ ಅವರು ಪಿಟಿಐಗೆ ತಿಳಿಸಿದ್ದಾರೆ.
       ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಸೇರಿದಂತೆ ಜಾಗತಿಕವಾಗಿ ಪಾಕಿಸ್ತಾನದ ಮೇಲೆ ಸತತ ಒತ್ತಡ ಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನ ಅನಿವಾರ್ಯವಾಗಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap