ಮಗುವಿಗೆ ಜನ್ಮ ನೀಡಿದ 8 ನೇ ತರಗತಿ ವಿದ್ಯಾರ್ಥಿನಿ!!

0
121

ಭುವನೇಶ್ವರ:

Image result for minor girl pregnant

      8 ನೇ  ತರಗತಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಖಂದಮಾಲ ಎಂಬಲ್ಲಿ ನಡೆದಿದೆ.

      ವಿದ್ಯಾರ್ಥಿನಿಗೆ 14 ವಯಸ್ಸಾಗಿದ್ದು, 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ಶನಿವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಹುಟ್ಟಿದ ಬಳಿಕ ಆಕೆ ಮತ್ತು ಮಗುವನ್ನು ಹಾಸ್ಟೆಲ್ ನಿಂದ ಹೊರಗೆ ಹತ್ತಿರದ ಅರಣ್ಯಕ್ಕೆ ತಳ್ಳಿದ್ದಾರೆ ಎನ್ನಲಾಗಿದೆ.

     ಭಾನುವಾರ ಮುಂಜಾನೆ ಇಬ್ಬರು ಅರಣ್ಯ ಅಧಿಕಾರಿಗಳು ಬಾಲಕಿಯನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

      ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಬಾಲಕಿ ಗರ್ಭಿಣಿಯಾಗಿದ್ದುಕೊಂಡು ಹಲವು ತಿಂಗಳುಗಳಿಂದ ಶಾಲೆಗೆ ಆಗಮಿಸುತ್ತಿದ್ದರೂ ಪೊಲೀಸರಿಗೆ ತಿಳಿಸದೆ ಇರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಒಟ್ಟು ಏಳು ಮಂದಿ ಶಾಲಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜೊತೆಗೆ ಹಾಸ್ಟೆಲ್‍ನ ಇಬ್ಬರು ಅಡುಗೆ ಭಟ್ಟರು, ಮಹಿಳಾ ಮೇಲ್ವಿಚಾರಕಿ ಹಾಗೂ ಓರ್ವ ದಾದಿಯನ್ನು ಜಿಲ್ಲಾಧಿಕಾರಿಯವರು ಅಮಾನತು ಮಾಡಿದ್ದಾರೆ.

8 ತಿಂಗಳ ಹಿಂದೆ ಅತ್ಯಾಚಾರ:

Related image

     ಎಂಟು ತಿಂಗಳ ಹಿಂದೆ ಬಾಲಕಿ ಮನೆಗೆ ಹೋಗುತ್ತಿದ್ದ ಸಂಬರ್ಧದಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಆದರೆ ಬಾಲಕಿ ಭಯದಿಂದ ಈ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರಿಂಗ್‍ಬಾದಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

      ಸದ್ಯ ಬಾಲಕಿ ಹಾಗೂ ಆಕೆಯ ಮಗು ಇಬ್ಬರನ್ನು ಫುಲಬಾನಿ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಮತ್ತು ತಾಯಿ ಇಬ್ಬರ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಅಪರಾಧಕ್ಕೆ ಕಾರಣವಾದವರನ್ನು ಕೂಡಲೇ ಬಂಧಿಸಬೇಕು ಎಂದು ಸಾರ್ವಜನಿಕರು ಪೊಲೀಸರಿಗೆ ಆಗ್ರಹಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here