ಲೋಕಸಭಾ ಚುನಾವಣೆಗೆ SP-BSPಯಿಂದ ಮಹಾಮೈತ್ರಿ!!

0
83

ಲಖನೌ:

     ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಮತ್ತು ಸಮಾಜವಾದಿ ಪಾರ್ಟಿ ನಡುವಿನ ಮೈತ್ರಿ ಅಧಿಕೃತವಾಗಿ ಘೋಷಣೆಯಾಗಿದೆ.

      ಲಖನೌನ ಪಂಚತಾರಾ ಹೋಟೆಲ್‌ನಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ವರಿಷ್ಠ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಾರ್ಟಿ (ಎಸ್ಪಿ) ಅಧ್ಯಕ್ಷ ಅಖಿಲೇಶ್‌ ಯಾದವ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೈತ್ರಿ ಘೋಷಣೆ ಮಾಡಿದ್ದು, ಸೀಟು ಹಂಚಿಕೆ ವಿಚಾರವಾಗಿ ಇಬ್ಬರೂ ನಾಯಕರು ಈಗಾಗಲೇ ಮಾತುಕತೆ ಪೂರ್ಣಗೊಳಿಸಿದ್ದಾರೆ. 

      ಸುದ್ದಿಗೋಷ್ಠಿ ನಡೆಸಿದ ಬಳಿಕ ಮಾತನಾಡಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಎಸ್ಪಿ, ಬಿಎಸ್ಪಿ ಜೊತೆಯಾಗಿ ಎದುರಿಸಲಿದ್ದು, ದೇಶದಲ್ಲಿ ಹೊಸ ರಾಜಕೀಯ ಕ್ರಾಂತಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿದ್ದೆಗೆಡಿಸಲಿದೆ ಎಂದು ತಿಳಿಸಿದ್ದಾರೆ.

      ಎಸ್ಪಿ , ಬಿಸ್ಪಿ ಜೊತೆಗಿನ ಮೈತ್ರಿ ಇದೇ ಮೊದಲಲ್ಲ. 1990ರ ಹಿಂದೆಯೇ  ಕೋಮುವಾದಿ ಬಿಜೆಪಿಯನ್ನು ಸೋಲಿಸಲು  ಕಾನ್ಪಿರಾಂ ಹಾಗೂ ಮುಲಾಯಂ ಸಿಂಗ್ ಯಾದವ್  ಒಪ್ಪಂದ ಮಾಡಿಕೊಂಡಿದ್ದರು ಎಂದು ತಿಳಿಸಿದರು. ಆ ಮೈತ್ರಿ ಬಹಳ ಕಾಲದವರೆಗೂ ಮುಂದುವರೆಯಲಿಲ್ಲ. ಆದರೆ, ಈಗ ಅದೇ ಸಿದ್ಧಾಂತ ಹಾಗೂ ಚಿಂತನೆಗಳೊಂದಿಗೆ ಜೊತೆಯಾಗಿ ಚುನಾವಣೆಯನ್ನು ಎದುರಿಸುವುದಾಗಿ  ತಿಳಿಸಿದರು.

Related image

     ”ಬಿಎಸ್ಪಿ-ಎಸ್ಪಿ ನಡುವಿನ ಅಂಕಗಣಿತ ಸರಿಯಾದ ರೀತಿಯಲ್ಲೇ ಇದೆ. ಅದು ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಸಾಬೀತಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಅದೇ ಫಲಿತಾಂಶ ಮರುಕಳಿಸಲಿದ್ದು ಬಿಜೆಪಿ ಸೋಲುವುದು ನಿಶ್ಚಿತ,” ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದರು. 

      25 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿರುವುದಾಗಿ ಅಖಿಲೇಶ್‌ ಯಾದವ್ ಹಾಗೂ ಮಾಯಾವತಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here