ಶ್ರೀರಾಮುಲು ಅಣ್ಣನಿಗೆ ಧನ್ಯವಾದ ಎಂದ ಡಿಕೆಶಿ

0
199
ಬೆಂಗಳೂರು:
 
        ಬಳ್ಳಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ತನ್ನ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್  ಬಿಜೆಪಿಯಿಂದ ಕಸಿದುಕೊಂಡಿದೆ. 
        ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಉಸ್ತುವಾರಿ ವಹಿಸಿಕೊಂಡಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಬಲಶಾಲಿಯಾಗಿದ್ದಾರೆ. 
        ಉಪಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಉಗ್ರಪ್ಪ ಅವರ ಗೆಲುವಿನ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ ಶಿವಕುಮಾರ್ ಬಳ್ಳಾರಿಯಲ್ಲಿ ಶಾಂತಿಯುತ ಮತದಾನ ನಡೆದಿದೆ. ಮೈತ್ರಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ್ದಕ್ಕೆ ಕ್ಷೇತ್ರದ ಜನತೆಗೆ ಹಾಗೂ ಮೂವರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ, ಮೊದಲನೆಯದಾಗಿ ಶ್ರೀರಾಮುಲು ಅಣ್ಣನಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಶ್ರೀರಾಮುಲುಗೆ ಟಾಂಗ್ ಕೊಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here