ನವದೆಹಲಿ:
ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಇಂದು ತೀರ್ಪು ಪ್ರಕಟಿಸಿದೆ.
ತೀರ್ಪು:
ಪ್ರಾರ್ಥನೆಗೆ ಯಾವುದೇ ತಾರತಮ್ಯ ಇರಬಾರದು. ಶರೀರದ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಮಹಿಳೆಯರು ತಮ್ಮ ಹಕ್ಕಿಗಾಗಿಹೋರಾಡಿದ್ದಾರೆ. ಅವರನ್ನು ತಾರತಮ್ಯದಿಂದ ನೋಡಲಾಗುತ್ತಿದೆ. ಹಾಗಾಗಿ ಅವರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.
ದೇವಸ್ಥಾನದ ನಿಯಮ:
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದ.
ನಿಯಮಾವಳಿ ವಿರುದ್ಧ ದೂರು:
ಆದರೆ ಇದರಿಂದ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ವಿವಾದ ಎದ್ದಿತ್ತು.
ಅಕ್ಟೋಬರ್ 2 ರಂದು ನಿವೃತ್ತರಾಗುತ್ತಿರುವ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನೀಡುತ್ತಿರುವ ಮಹತ್ವದ ತೀರ್ಪುಗಳಲ್ಲಿ ಇದೂ ಒಂದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ