ಕಟ್ಟುನಿಟ್ಟಿನ ಕಾನೂನುವಿದ್ದರೂ ಅಪರಾಧ ಹೆಚ್ಚಳ

0
14

ದಾವಣಗೆರೆ:

        ಕಾನೂನು ಕಟ್ಟುನಿಟ್ಟಾಗಿದ್ದರೂ ಸಹ ಅಪರಾಧಗಳ ಸಂಖ್ಯೆ ವ್ಯಾಪಕವಾಗುತ್ತಿರುವುದು ದುರಂತ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಅಂಬಾದಾಸ್ ಕುಲಕರ್ಣಿ ಬೇಸರ ವ್ಯಕ್ತಪಡಿಸಿದರು.

     ನಗರದ ಹಳೇ ಕೋರ್ಟ್ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವುಗಳ ಸಂಯುಕ್ರಾಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತು ನ್ಯಾಯಾಧೀಶರಿಗೆ ಮತ್ತು ಸರ್ಕಾರಿ ಅಭಿಯೋಜಕರಿಗೆ ಹಮ್ಮಿಕೊಂಡಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು

      ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ. ಅವುಗಳನ್ನು ತಡೆಗಟ್ಟಲು ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನು ಕಠಿಣವಾಗಿದ್ದರೂ ಸಹ ಅಪರಾಧಗಳು ಹೆಚ್ಚಾಗುತ್ತಿವೆ. ವಕೀಲರು ಮತ್ತು ಸರ್ಕಾರಿ ಅಭಿಯೋಜಕರು ತಮಗೆ ಗೊತ್ತಿಲ್ಲದ ವಿಚಾರಗಳನ್ನು ತಿಳಿದುಕೊಳ್ಳಬೇಕು ಅಲ್ಲದೇ ವಕೀಲರಿಗೆ ಕಾಯ್ದೆಗಳ ಬಗ್ಗೆ ಅರಿವು ಅಗತ್ಯವಾಗಿದೆ ಎಂದರು.

        ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಯಲ್ಲಿ ನೊಂದವರ ಸಬಲೀಕರಣಕ್ಕೆ ಒತ್ತು ನೀಡುವ ಅವಶ್ಯಕ ಇದ್ದು, ಅವರ ಅಡಗಿರುವ ಕೌಶಲ್ಯಕ್ಕೆ ತಕ್ಕಂತೆ ತರಬೇತಿ ನೀಡಿ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಸಮಾಜ ನೆರವಾಗಬೇಕಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ

     ಎಲ್‍ಹೆಚ್.ಅರುಣ್‍ಕುಮಾರ್, ಭಾರತದ ನ್ಯಾಯಾಂಗ ತನ್ನ ಐತಿಹಾಸಿಕ ತೀರ್ಪುಗಳ ಮೂಲಕ ಸಮಾಜದಲ್ಲಿ ಶೋಷಣೆಗೆ ಒಳಗಾದ ವರ, ಮಹಿಳೆಯರ, ಮಾನವ ಹಕ್ಕುಗಳ, ವ್ಯಕ್ತಿ ಘನತೆ, ಸ್ವಾತಂತ್ರ ಹಾಗೂ ಸಾಮಾಜಿಕ ನ್ಯಾಯ ಒದಗಿಸುತ್ತಾ ಪ್ರಪಂಚದಲಿಯೇ ಆದರ್ಶ ನ್ಯಾಯಾಂಗವಾಗಿದೆ ಎಂದರು

     ದೇಶದ ಜನಸಂಖ್ಯೆ 135ಕೋಟಿ ದಾಟ್ಟಿದ್ದರೂ ಸಹ ಅನಕ್ಷರತೆ, ಕಾನೂನುಗಳ ಬಗ್ಗೆ ಅಜ್ಞಾನ, ಬಡತನ ಹಾಗೂ ಆರ್ಥಿಕ ಸಂಕಷ್ಟಗಳಿಂದ ತಮ್ಮ ಹಕ್ಕುಗಳಿಗಾಗಿ ನ್ಯಾಯಕ್ಕಾಗಿ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಬರುವವರ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಕಾನೂನು ಸೇವಾ ಪ್ರಾಧಿಕಾರವು ಆರ್ಥಿಕವಾಗಿ ಹಿಂದುಳಿದವರಿಗೆ, ದುರ್ಬಲರಿಗೆ ಉಚಿತವಾಗಿ ಕಾನೂನು ಅರಿವು-ನೆರವು ನೀಡುವ ಮೂಲಕ ನ್ಯಾಯ ಒದಗಿಸುವಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

      ಸುಸ್ತಿರ ಸಮಾಜ ನಿರ್ಮಾಣಕ್ಕೆ, ಅಗತ್ಯಕ್ಕೆ ತಕ್ಕಂತೆ ಕಾನೂನು ಬದಲಾವಣೆ ಹಾಗೂ ತಿದ್ದುಪಡಿ ತರುವುದರ ಮೂಲಕ ಕಾನೂನು ಮತ್ತು ನ್ಯಾಯದ ಅಂತರವನ್ನು ಕಡಿಮೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಬಿ.ಎಲ್.ಜಿನರಾಲ್ಕರ್ ವಹಿಸಿದ್ದರು.

       ವಕೀಲ ಸಂಘದ ಅಧ್ಯಕ್ಷ ಎನ್.ಟಿ.ಮಂಝುನಾಥ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್‍ಕುಮಾರ್, ಎ.ಜಿ.ಅನುಪಮ, ಶ್ವೇತ ಇತರರು ಇದ್ದರು. ಕಾರ್ಯಾಗಾರದಲ್ಲಿ ಪೋಕ್ಸೋ ಕಾಯ್ದೆ ಕುರಿತು 2ನೇ ಹೆಚ್ಚು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗಶ್ರೀ ಎಸ್. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಿಲ್ಲಾ ಸತ್ರ ನ್ಯಾಯಾಲಯದ ಅಭಿಯೋಜಕ ಎಸ್.ವಿ.ಪಾಟೀಲ್, ಮಕ್ಕಳ ಹಕ್ಕುಗಳ ಕುರಿತು ವಕೀಲ ದಾದಾಪೀರ್ ಉಪನ್ಯಾಸ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here