ಎಲ್ಲಾ ಕ್ಷೇತ್ರದಲ್ಲಿಯು ಚಾಪನ್ನು ಮೂಡಿಸುತ್ತಿರುವ ಮಹಿಳೆಯರು

ಜಗಳೂರು :

       ಹಿಂದೆ ಅಡಿಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿಯು ,ಮಹಿಳೆಯರು ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ ಎಂದು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ರೇಣುಕುಮಾರ್ ಹೇಳಿದರು

        ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರೈತ ಮಾಹಿಳಾ ದಿನಚಾರಣೆಯ ಕಾರ್ಯ ಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

         ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ. ಹಗಲಿರುಳು ಮಹಿಳೆಯರು ಕೃಷಿಯಲ್ಲಿ ತೊಡಗುತ್ತಿದ್ದು ಪುರುಷರಷ್ಟೆ ವiಹಿಳೆಯು ಸಮಾನಳು ಎಂಬುವುದನ್ನು ಸಾಧಿಸಿ ತೋರಿಸಿದ್ದಾರೆ ಎಂದರು.

          ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಚಮ್ಮ ಮಾತನಾಡಿ ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ ಅಲ್ಲಿ ದೇವರು ನೆಲೆಸಿರುತ್ತಾನೆ ಎಂಬ ನಂಬಿಕೆಯು ಸತ್ಯವಾಗಿದ್ದು, ಮಹಿಳೆಯರು ದೈರ್ಯದಿಂದ ಅಡಿಗೆ ಮನೆಯ ಜೊತೆಗೆ ಶಿಕ್ಷಣ, ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುನ್ನುಗ್ಗುತ್ತಿದ್ದಾರೆ. ಇಂತಹ ಕುಟುಂಬದವರ ಪ್ರೋತ್ಸಾಹ ನೀಡುವುದರಿಂದ ವiಹಿಳಾ ಸಬಲಿಕರಣಕ್ಕೆ ಸಹಕಾರಿಯಗಲಿದೆ ಎಂದು ಹೇಳಿದರು
ಈ ಸಂಧರ್ಭದಲ್ಲಿ ಮುಸ್ಟೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ತಿಪ್ಪಮ್ಮ , ಸದಸ್ಯರಾದ ಯಶೋದಮ್ಮ, ಸಿದ್ದಲಿಂಗಮ್ಮ, ಸುನಿತಾ, ಸಂಪನ್ಮೂಲ ವ್ಯಕ್ತಿಗಳಾದ ಮಂಜಣ್ಣ, ಸೇರಿದಂತೆ ಮತ್ತಿತರರು ಹಾಜರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap