ವಿಶ್ವನಾಥ್ ಗೆ ದೇವೆಗೌಡರ ಸೂಚನೆ

0
24

ಬೆಂಗಳೂರು

        ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಸೂಚಿಸಿದ್ದು, ತಾವು ಅದಕ್ಕೆ ಸಮ್ಮತಿಸಿರುವುದಾಗಿ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

          ಇಂದು ಬೆಳಗ್ಗೆ ದೇವೆಗೌಡರನ್ನು ಭೇಟಿ ಮಾಡಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಅನಾರೋಗ್ಯದ ಕಾರಣ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಹೊಂದಲು ಬಯಸಿದ್ದು ನಿಜ, ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೂ ಮನವರಿಕೆ ಮಾಡಲು ಪ್ರಯತ್ನಿಸಿದೆ. ಆದರೆ ಅವರು ಪಕ್ಷದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಅವರ ಆದೇಶದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

        ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಐದು ವಲಯಗಳಲ್ಲಿ ಬಲಪಡಿಸಲು ನಿರ್ಧರಿಸಲಾಗಿದ್ದು, ಜನತಾ ಪರಿವಾರದಿಂದ ದೂರವಾಗಿರುವ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here