ಎಚ್1ಎನ್1 ಗೆ 17 ಬಲಿ

0
21

ಬೆಂಗಳೂರು

        ಬಿಬಿಎಂಪಿ ಎಚ್1ಎನ್1 ಭೀತಿ ಹೆಚ್ಚಾಗಿದ್ದು, ಈವರೆಗೆ 17 ಜನ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ.ಎಚ್1ಎನ್.1 ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲೂ ಸಹ ರೋಗ ಹರಡದಂತೆ, ಸಾವು ನೋವು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಮೆಟ್ರೋ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಜಾಗೃತಿ ಮೂಡಿಸುವ ಸಂದೇಶ ಪ್ರಸಾರವಾಗುತ್ತಿದೆ.

ಕಳೆದೊಂದು ತಿಂಗಳಿಂದ ಈ ಸೋಂಕು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ 999 ಎಚ್1ಎನ್1 ಪ್ರಕರಣಗಳು ಪತ್ತೆಯಾಗಿವೆ. ಬಹುತೇಕ ಆಸ್ಪತ್ರೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಸೇರಿದಂತೆ ಉಸಿರಾಟದ ತೊಂದರೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಜನ ಚಿಕಿತ್ಸೆಗಾಗಿ ದಾಖಲಾಗುತ್ತಿದ್ದಾರೆ.

ಬೆಂಗಳೂರಿನಲ್ಲೂ ಪ್ರಕರಣಗಳು ಹೆಚ್ಚಾಗಿದ್ದು, ಈ ಸೋಂಕಿನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ 190 ಪ್ರಕರಣಗಳು ದಾಖಲಾಗಿದ್ದು, 17 ಜನ ಸಾವನ್ನಪ್ಪಿದ್ದಾರೆ. ಎಚ್?1ಎನ್?1 ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲ ಕ್ರಮ ಕೈಗೊಂಡಿದ್ದು, ಈ ಬಗ್ಗೆ ಜಾಗೃತಿ ಕೂಡ ಮೂಡಿಸಲಾಗಿದೆ.

ಹಂದಿಜ್ವರ ಎಂದೇ ಖ್ಯಾತಿ ಹೊಂದಿರುವ ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಶೀಘ್ರವಾಗಿ ಹರಡುವುದರಿಂದ ಸೋಂಕು ಹರಡುವುದರಿಂದ ದ್ವಿಗುಣಗೊಳ್ಳುತ್ತಿದೆ. ನೀರಿನ ಸೇವನೆಯಿಂದ ಈ ಕಾಯಿಲೆ ಜನರಿಗೆ ತಗಲುತ್ತಿದ್ದು, ಸ್ವಲ್ಪ ಜ್ವರ, ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದರೆ, ಆಸ್ಪತ್ರೆಗೆ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಜಿಲ್ಲಾ ಮಟ್ಟದಲ್ಲಿ ಕೂಡ ರೋಗದ ಸೋಂಕಿನ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿಂದೆ ಈ ಬಗ್ಗೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್? ಕೂಡ ಮೇಯರ್, ಅಧಿಕಾರಿಗಳ ಸಭೆ ನಡೆಸಿ ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here