ಬಳ್ಳಾರಿ:
ಸರಕು ಸಾಗಣೆ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರ ಗ್ರಾಮದ ಬಳಿ ನಡೆದಿದೆ.
ಅತೀ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸಿಕೊಂಡು ಹಿಂಬದಿಯಾಗಿ ಬಂದ ಚಾಲಕ, ಮುಂದೆ ಸಾಗುತ್ತಿದ್ದ ಈ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.