ಗುಜರಾತ್ : ಅಕಾಲಿಕ ಮಳೆಗೆ 36 ಸಾವು..!!

0
26
ಅಹ್ಮದಾಬಾದ್:
        ಕಳೆದ 2 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಈ ವರೆಗೂ ಸುಮಾರು 36 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
        ಉತ್ತರ ಗುಜರಾತ್ ಮತ್ತು ಸೌರಾಷ್ಟ್ರ ಪ್ರಾಂತ್ಯದಲ್ಲಿ ಕಳೆದ 2 ದಿನಗಳಿಂದ ಸುರಿದ ಅಕಾಲಿಕ ಭಾರಿ ಮಳೆ ಹಾಗೂ ಧೂಳು ಸಹಿತ ಚಂಡಮಾರುತ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದ್ದು, ಈವರೆಗೂ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಂತೆಯೇ ಹಲವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಜಿಬಿ ಮಂಗ್ಲಪಾರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
       ಉತ್ತರ ಗುಜರಾತ್ ಭಾಗದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದ್ದು, ಇಲ್ಲಿ ಸಂಭವಿಸಿದ ಭಾರಿ ಗುಡುಗು ಮತ್ತು ಮಿಂಚಿನಿಂದಾಗಿ ಹತ್ತಾರು ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿಸಿವೆ ಎಂದು ತಿಳಿದುಬಂದಿದೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here