ಎಸ್.ಎಸ್.ಎಲ್.ಸಿ ಪರೀಕ್ಷೆ : ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ…!!

ಗುಬ್ಬಿ

     ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಈಗಾಗಲೆ ಅಗತ್ಯ ಪೂರ್ವ ಭಾವಿ ಸಿದ್ದತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ತಿಳಿಸಿದರು.

      ಮಾ21 ರಂದು ಕನ್ನಡ, ಮಾ 25 ರಂದು ಗಣಿತ, ಮಾ 27 ರಂದು ಇಂಗ್ಲೀಷ್, ಮಾ 29 ರಂದು ಸಮಾಜ ವಿಜ್ಞಾನ, ಏಪ್ರಿಲ್ 2 ರಂದು ವಿಜ್ಞಾನ ಮತ್ತು ಏಪ್ರಿಲ್ 4 ರಂದು ಹಿಂದಿ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಗೆ ಸಿದ್ದಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕೊಠಡಿ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸಿಸಿ.ಕ್ಯಾಮರಾಗಳ ಅಳವಢಿಕೆ ಸೇರಿದಂತೆ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆಯಾದರೆ ಅಗತ್ಯ ಆರೋಗ್ಯ ಸೇವೆ ಕಲ್ಪಿಸಲು ಸೂಕ್ತವಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

        ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3304 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಗೆ ಹಾಜರಾಗುತ್ತಿದ್ದು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಮುಖ್ಯ ಅಧೀಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಒಂದು ಪರೀಕ್ಷಾ ಕೇಂದ್ರಕ್ಕೆ ಒಬ್ಬರು ಉಪ ಅಧೀಕ್ಷರನ್ನು ನೇಮಿಸಲಾಗಿದೆ ಅಲ್ಲದೆ ಪ್ರಶ್ನೆ ಪತ್ರಿಕೆ ನಿರ್ವಹಣೆಗಾಗಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ 14 ಅಭಿರಕ್ಷಕರು, 14 ಸ್ಥಾನಿಕ ಜಾಗೃತ ದಳದ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಅಲ್ಲದೆ ವಿವಿಧ ಇಲಾಖೆಗಳಿಂದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಜಿಲ್ಲಾಧಿಕಾರಿಗಳು ನಿಯೋಜಿಸಿದ್ದಾರೆ ಈ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾ ಮಟ್ಟದ ವಿಚಕ್ಷಣ ದಳದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಸೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

        ಪರೀಕ್ಷಾ ಕೇಂದ್ರಗಳ ಮಾರ್ಗಾಧಿಕಾರಿಗಳನ್ನಾಗಿ ಶಿಕ್ಷಣ ಸಂಯೋಜಕರು ಮತ್ತು ದೈಹಿಕ ಶಿಕ್ಷಣ ಸಂಯೋಕರನ್ನು ನಿಯೋಜಿಸಲಾಗಿದೆ. ನಕ್ಷೆಯಂತೆ 4 ಮಾರ್ಗಗಳಲ್ಲಿ ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆಗಳನ್ನು ಕೆಂದ್ರಗಳಿಗೆ ಬಿಗಿ ಭದ್ರತೆಯೊಂದಿಗೆ ಕೊಂಡೊಯ್ಯಲಾಗುವುದೆಂದು ತಿಳಿಸಿದರು.

         ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವರೆಗೆ 144 ನೇ ಸೆಕ್ಷನ್ ಜಾರಿಗೊಳಿಸಲಾಗಿದ್ದು ಕೇಂದ್ರಗಳ ಸುತ್ತ ಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ಆರಂಭದಿಂದ ಮುಗಿಯುವವರೆಗೂ ಮುಚ್ಚುವಂತೆ ಸೂಚನೆ ನೀಡಲಾಗಿದೆ ಒಟ್ಟಾರೆ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಮಾಡಲಾಗಿದೆ ಎಂದು ತಿಳಿಸಿದ ಅವರು ಪರೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಬಿಇಓ ಮೊ.ನಂ:9480695353, ವಾಗೀಶ್ ಶಿಕ್ಷಣ ಸಂಯೋಜಕರು. ಮೊ ನಂ:9483560218 ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap