ಬಳ್ಳಾರಿ ಲೋಕಸಭಾ ಕ್ಷೇತ್ರದ ಮತದಾರರು ಬಿಜೆಪಿಯನ್ನೇ ಆಯ್ಕೆ ಮಾಡುವರು.

0
12

ಚಳ್ಳಕೆರೆ

         ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಸ್ವಾಭಿಮಾನಿ ಮತದಾರರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜಿ.ಶಾಂತರವರಿಗೆ ಮತ ನೀಡಿ ಅವರನ್ನು ಪುನಃ ಲೋಕಸಭೆಗೆ ಆಯ್ಕೆ ಮಾಡುವರು ಎಂಬ ಆತ್ಮವಿಶ್ವಾಸವನ್ನು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಜನಾರ್ಥನ ಸ್ವಾಮಿ ತಿಳಿಸಿದರು.

         ಅವರು, ಗುರುವಾರ ಸಂಜೆ ಬಳ್ಳಾರಿ ಕ್ಷೇತ್ರ ಪ್ರಚಾರ ಮುಗಿಸಿ ಚಿತ್ರದುರ್ಗಕ್ಕೆ ಹೋಗುವ ಮಾರ್ಗದಲ್ಲಿ ಚಳ್ಳಕೆರೆಯ ವಾಲ್ಮೀಕಿ ವೃತ್ತದಲ್ಲಿ ಕಾರ್ಯಕರ್ತರ ಸಮಾಲೋಚನೆ ನಡೆಸಿದ ನಂತರ ಪತ್ರಿಕೆಯೊಂದಿಗೆ ಮಾತನಾಡಿ, ಬಳ್ಳಾರಿ ಕ್ಷೇತ್ರದ ಉಪ ಚುನಾವಣೆ ಗೆಲುವಿಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕೂಟದ ಇಡೀ ಸರ್ಕಾರವೇ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂಬ ಹಿನ್ನೆಲೆಯಲ್ಲಿ ಅಧಿಕಾರಿ ವರ್ಗವನ್ನು ಸರ್ಕಾರವೇ ನಿಯಂತ್ರಿಸಿದೆ.

         ಹಾಗಾಗಿ ಚುನಾವಣೆಯ ಬಗ್ಗೆ ಭಾರತೀಯ ಜನತಾ ಪಕ್ಷ ಮನೆ ಮನೆಗೂ ತೆರಳಿ ಸಾವಿರಾರು ಕಾರ್ಯಕರ್ತರು ಬಿಜೆಪಿ ಪರ ಮತಯಾಚನೆ ಮಾಡಿದ್ದಾರೆ. ಬಳ್ಳಾರಿ ಕ್ಷೇತ್ರದ ಜನತೆ ಸದಾ ಭಾರತೀಯ ಜನತಾ ಪಕ್ಷವನ್ನೇ ಆಯ್ಕೆ ಮಾಡುತ್ತಾರೆಂಬ ಅಚಲವಾದ ನಂಬಿಕೆ ನನ್ನಲ್ಲಿದೆ ಎಂದರು.

        ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ, ಹಿರಿಯ ದುರೀಣರಾದ ಬಿ.ಎಸ್.ಶಿವಪುತ್ರಪ್ಪ, ಡಿ.ಎಂ.ತಿಪ್ಪೇಸ್ವಾಮಿ, ವೆಂಕಟಪ್ಪ, ಕರೀಕೆರೆ ತಿಪ್ಪೇಸ್ವಾಮಿ, ಕಾಟಪ್ಪನಹಟ್ಟಿ ವೀರೇಶ್ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here