ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಬೈಕ್‍ ಸವಾರ ಸಾವು

0
9

ಬೆಂಗಳೂರು

         ತಿರುಪತಿಯಿಂದ ನಗರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸವಾರ ಮೃತಪಟ್ಟರೆ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

        ಎಂವಿ ಗಾರ್ಡನ್‍ನ ಶರತ್ (30)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಗಾಯಗೊಂಡು ಸಾಯಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ (31) ಸ್ಥಿತಿ ಗಭೀರವಾಗಿದೆ.

         ಸೆಂಟ್ರಲ್‍ಮಾಲ್‍ನಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಅವರನ್ನು ಹಿಂದೆ ಕೂರಿಸಿಕೊಂಡು ರಾತ್ರಿ 12.30 ಬೈಕ್‍ನಲ್ಲಿ ಹೋಗುತ್ತಿದ್ದ ಶರತ್, ಹಳೇ ಮದ್ರಾಸ್ ರಸ್ತೆಯ 100 ಅಡಿ ರಸ್ತೆಯಲ್ಲಿ ಇಂದಿರಾನಗರಕ್ಕೆ ಬಲಗಡೆ ತಿರುವು ತೆಗೆದುಕೊಳ್ಳುವಾಗ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

          ಡಿಕ್ಕಿಯ ರಭಸಕ್ಕೆ ಶರತ್ ಸ್ಥಳದಲ್ಲಿಯೇ ಮೃತಪಟ್ಟರೆ, ತಲೆಗೆ ಗಂಭೀರ ಗಾಯಗೊಂಡ ಸಂತಷ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಡಿಸಿಪಿ ಜಗದೀಶ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಡಿಕ್ಕಿ ಸಾವು

          ಟ್ರ್ಯಾಕ್ಟರ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

           ಕೋಲಾರದ ಜಯನಗರದ ನಂಜುಂಡಪ್ಪ(67)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ,ಅವರ ಪತ್ನಿ ನಾರಾಯಣಮ್ಮ (55) ಹಾಗು ಸೊಸೆ ಶೀಲಾ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.

         ಮೃತ ನಂಜುಂಡಪ್ಪ ಕುಟುಂಬ ಸಮೇತ ಸಂಬಂಧಿಕರ ಮನೆಗೆ ಕಾರಿನಲ್ಲಿ ಹೋಗುವಾಗ ಮಾರ್ಗ ಮಧ್ಯೆ ನಂದಗುಡಿ ಬಳಿ ಒಣ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.ಕಾರು ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ ಸ್ಥಳಕ್ಕೆ ನಂದಗುಡಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here