ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ

ಚಿತ್ರದುರ್ಗ

      ಈ ಬಾರಿ ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಸಂಸತ್ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಕರ್ನಾಟಕ ಲೋಕಸಭಾ ಉಸ್ತುವಾರಿ ಕಿರಣ್ ಮಹೇಶ್ವರಿ ತಿಳಿಸಿದರು.

        ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಐದು ವರ್ಷಗಳಲ್ಲಿ ಹಲವಾರು ವಿವಿಧ ರೀತಿಯ ಯೋಜನೆಗಳನ್ನು ಜಾರಿ ಮಾಡುವುದ್ದಲ್ಲದೆ ಮಹಿಳೆಯರು, ಯುವ ಜನಾಂಗವನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನ ಮಂತ್ರಿಗಳು ಆಡಳಿತವನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದರು.

        ಸ್ವಾತಂತ್ರ್ಯ ಬಂದು 70 ವರ್ಷಗಳಲ್ಲಿ ಆಗದಿರುವ ಕೆಲಸವನ್ನು ಕೇವಲ 5 ವರ್ಷಗಳಲ್ಲಿ ಮಾಡು ಎಂದರೆ ಹೇಗಾಗುತ್ತದೆ ಈಗ ದೇಶವನ್ನು ಒಂದು ಹಂತಕ್ಕೆ ತರಲಾಗಿದೆ, ಮುಂದಿನ ದಿನಮಾನದಲ್ಲಿ ಅದನ್ನು ಸರಿಯಾದ ದಾರಿಯಲ್ಲಿ ನಡೆಸಲಾಗುತ್ತದೆ ಇದಕ್ಕೆ ಮತ್ತೇ ಮೋದಿಯವರ ನಾಯಕತ್ವ ಅಗತ್ಯವಾಗಿದೆ, ಈ ಹಿನ್ನಲೆಯಲ್ಲಿ ಬಿಜೆಪಿ ವಿರ್ವಿ ಕಾರ್ಯಕ್ರಮಗಳನ್ನು ರೂಪಿಸಿದೆ ಅದರಂತೆ ಆವುಗಳನ್ನು ಮಾಡುವುದರ ಮೂಲಕ ಮತದಾರರ ಬಳಿ ಹೋಗಿ ಸರ್ಕಾರದ ಸಾಧನೆಯನ್ನು ತಿಳಿಸಲಾಗುತ್ತದೆ ಎಂದು ಹೇಳಿದರು.

      ಅವರು, ಕಳೆದ ಐವತ್ತೈದು ವರ್ಷಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಬಡವರಿಗಾಗಿ ಯಾವುದೇ ಹೇಳಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲಿಲ್ಲ. ಗರೀಬಿ ಹಠಾವೋ ಸೇರಿದಂತೆ ಕೆಲವು ಕಾರ್ಯಕ್ರಮಗಳು ಕೇವಲ ಘೋಷಣೆಗಳಾಗಿಯೇ ಉಳಿದವು. ದೇಶದಲ್ಲಿ ಬಡವರು ಮಾತ್ರ ಕಷ್ಟಪಡುವುದು ತಪ್ಪಲಿಲ್ಲ ಎಂದರು.

     ಆದರೆ ಕಳೆದ ಐದು ವರ್ಷಗಳ ಕಾಲ ಅಧಿಕಾರ ನಡೆಸಿದ ಎನ್‍ಡಿಎ ಸರ್ಕಾರವು ಕಳೆದ ಐವತ್ತೈದು ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಕಾಂಗ್ರೆಸ್ ಸರ್ಕಾರ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು 48 ಸಾವಿರ ರೂ. ನೀಡುತ್ತಿತ್ತು. ಮಧ್ಯವರ್ತಿಗಳ ಹಾವಳಿಯಿಂದಾಗಿ ಇದರಲ್ಲಿ ಕೇವಲ 20 ಸಾವಿರ ರೂ. ಮಾತ್ರ ಬಡಜನರ ಕೈಗೆ ಸಿಗುತ್ತಿತ್ತು. ಇದರಿಂದ ಬಡವರು ಮನೆ ನಿರ್ಮಿಸಿಕೊಳ್ಳಲು ಕಷ್ಟಪಡುತ್ತಿದ್ದರು ಎಂದು ಹೇಳಿದರು.

       ದೇಶದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದನ್ನು 1.5 ಲಕ್ಷಕ್ಕೆ ಏರಿಕೆ ಮಾಡಲಾಯಿತು. ಇದರಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲ. ನೇರ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತಿದೆ. ಇದರಿಂದ ಫಲಾನುಭವಿಗಳಿಗೆ ಯಾವುದೇ ತೊಂದರೆ ಇಲ್ಲ. ಈ ಹಣದಲ್ಲಿ ಬಡವರು ಒಂದು ಸೂರು ನಿರ್ಮಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಅವರ ಜೀವನ ಮಟ್ಟ ಸುಧಾರಿಸಿದೆ ಎಂದರು.

       ಕಳೆದ ಐದು ವರ್ಷಳಲ್ಲಿ ಪಂಡಿತ್ ದೀನ್‍ದಯಾಳ್ ಉಪಾಧ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಬಹುತೇಕ ಮನೆಗಳಿಗೆ ವಿದ್ಯುತ್ ಸೌಲಭ್ಯ ನೀಡಲಾಗಿದೆ. ಅಡುಗೆ ಅನಿಲ ಸಂಪರ್ಕ ಹೊಂದದೇ ಇರುವ ಗ್ರಾಮೀಣ ಭಾಗದ 13 ಸಾವಿರ ಕೋಟಿ ಜನರಿಗೆ ಅಡುಗೆ ಅನಿಲ ಸಂಪರ್ಕ ನೀಡಲಾಗಿದೆ. ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಸ್ವಚ್ಛತಾ ಅಭಿಯಾನ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

       ಮುದ್ರಾ ಯೋಜನೆಯಿಂದ ಅನೇಕ ಜನರು ಸ್ವಂತ ವ್ಯಾಪಾರ ನಡೆಸುತ್ತಿದ್ದಾರೆ. ಜೀವನದಲ್ಲಿ ಸ್ವಾವಲಂಬನೆ ಗಳಿಸಿದ್ದಾರೆ. ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಬಲ ಬೆಲೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ಉದ್ದೇಶವಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಭಾರತ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಹಾಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಸಬೇಕು ಎಂದರು.

      ಪ್ರಸ್ತುತ ದಿನಗಳಲ್ಲಿ ಕೆಲವು ವಿರೋಧ ಪಕ್ಷಗಳು ಮಹಾಘಟಬಂಧನ್‍ಗೆ ಮುಂದಾಗಿವೆ. ಭ್ರಷ್ಟಾಚಾರಿಗಳು, ಮೋದಿ ಅವರನ್ನು ಕಂಡರೆ ಭಯಪಡುವ ಕೆಲವರು ಘಟಬಂಧನ್‍ಗೆ ಕೈಜೋಡಿಸಿದ್ದಾರೆ. ಅವರು ಏನೇ ಮಾಡಲಿ ದೇಶದ ಜನರು ಮಾತ್ರ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಬೇಕು. ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

        ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸಿದ್ದೇಶ್, ಲೋಕಸಭಾ ಚುನಾವಣಾ ಸಂಚಾಲಕ ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರತ್ನಮ್ಮ, ಮಲ್ಲಿಕಾರ್ಜುನ್, ಮುರುಳಿ, ವೈ.ರಾಮಯ್ಯ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap