ನಾಳೆ ಸಾರಿಗೆ ಸಂಚಾರ:ಅಡ್ಡಗೋಡೆಯ ಮೇಲೆ ದೀಪ ಇಟ್ಟ ಸಾರಿಗೆ ಸಚಿವರು

0
39

ಮಂಡ್ಯ: 

        ನಾಳೆ ಮತ್ತು ನಾಡಿದ್ದು ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು  ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ.

       ಅನೇಕ ಸಂಘ ಸಂಸ್ಥೆಗಳು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹಕರಿಸುತ್ತಾರೆ ಎಂದು ತಿಳಿಸಿದರು . ನಾನು ಇದನ್ನು ಸರ್ಕಾರ ಬೆಂಬಲಿಸುತ್ತದೆ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ ಎಂದು ಹೇಳುತ್ತಿದ್ದೇನೇ. ನಾಳೆ ಬಸ್ ಸಂಚಾರದ ಬಗ್ಗೆ ಪರಿಸ್ಥಿತಿ ನೋಡಿ ತೀರ್ಮಾನಕ್ಕೆ ಬರುತ್ತೇವೆ. ಆದರೆ ಬಂದ್ ಇರುವುದರಿಂದ ಸಾರಿಗೆ ವ್ಯವಸ್ಥೆ ಕಷ್ಟ ಎಂದು ಹೇಳಿದರು.ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here