ಎಸ್ಸೆಸ್ ನೇತೃತ್ವದಲ್ಲಿ ಕಾಂಗ್ರೆಸ್ ವಿಜಯೋತ್ಸವ

0
10

ದಾವಣಗೆರೆ:

       ಪಂಚಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು.

      ನಗರದ ಬಾಪೂಜಿ ಎಂಬಿಎ ಕಾಲೇಜಿನ ಆವರಣದಲ್ಲಿರುವ ಹೆಲಿ ಪ್ಯಾಡ್‍ನಲ್ಲಿ ವಿಜಯೋತ್ಸವ ಆರಚರಿಸಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

       ಬಳಿಕ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಹೆಚ್ಚಿನ ಮತಗಳ ಮೂಲಕ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು

       ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಕೂಟ ಕೇಂದ್ರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ದಾವಣಗೆರೆಯಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿ ಚುನಾವಣಾ ಕಚೇರಿ ಉದ್ಘಾಟಿಸಿ ಪ್ರಚಾರ ಆರಂಭಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಮನೂರು ಶಿವಶಂಕರಪ್ಪನವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ದಾವಣಗೆರೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷ ಯಾರಿಗೆ ಟಿಕೇಟ್ ನೀಡುತ್ತೋ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

         ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಪಂಚಾಯತ ಸದಸ್ಯ ಕೆ.ಎಸ್.ಬಸವಂತ್, ಎ.ನಾಗರಾಜ್, ಯತಿರಾಜ್, ಸುರೇಶ್, ಮುಜಾಹಿದ್ ಮತ್ತಿತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here