ಪುಟ್ಟರಂಗಶೆಟ್ಟಿ ಬೆನ್ನಿಗೆ ನಿಂತ ಕಾಂಗ್ರೆಸ್

0
20

ಬೆಂಗಳೂರು

         ವಿಧಾನಸೌಧದಲ್ಲಿ ಪತ್ತೆಯಾದ ಅಕ್ರಮ ಹಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಚಿವ ಪುಟ್ಟರಂಗಶೆಟ್ಟಿ ಬೆಂಬಲಕ್ಕೆ ನಿಂತಿದ್ದಾರೆ.

         ಸಚಿವ ಪುಟ್ಟರಂಗಶೆಟ್ಟಿ ಆರೋಪಿಯಲ್ಲ. ಹೀಗಾಗಿ ಸಚಿವರಿಂದ ಯಾವುದೇ ವಿವರಣೆ ಪಡೆಯುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

          ರಾಜ್ಯದ ಪೊಲೀಸರು ಸಮರ್ಥರಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತಾರೆ. ಆದ್ದರಿಂದ ಪ್ರಕರಣವನ್ನು ಎಸಿಬಿಗೆ ವಹಿಸುವುದು ಸೂಕ್ತವಲ್ಲ. ಅಕ್ರಮ ಹಣ ಪತ್ತೆ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದು ನಿಶ್ಚಿತ ಎಂದರು.

         ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಹಿಂದೆ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಮೇಲೆ ಆರೋಪ ಬಂದಾಗ ರಾಜೀನಾಮೆ ಕೊಡುವ ಅವಶ್ಯಕತೆಯೂ ಇರಲಿಲ್ಲ. ಹೀಗಿದ್ದರೂ ಸಹ ?ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ಸಚಿವಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗ ಪುಟ್ಟರಂಗಶೆಟ್ಟಿ, ಜಾರ್ಜ್ ರಾಜೀನಾಮೆ ನೀಡಿದಂತೆ ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ ಎಂದರು.

         ಸಚಿವ ಕೃಷ್ಣಭೈರೇಗೌಡರ ವಿರುದ್ಧವೂ ಲೋಕಾಯುಕ್ತದಲ್ಲಿ ದೂರು ಕೊಟ್ಟಿದ್ದಾರೆ. ಹೀಗಿದ್ದ ಮಾತ್ರಕ್ಕೆ ಅವರಿಂದ ರಾಜೀನಾಮೆ ಕೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

          ರಾಜಕಾರಣಿಗಳ ಮೇಲೆ ವಿರೋಧ ಪಕ್ಷದವರ ಆರೋಪಗಳು ಸರ್ವೆಸಾಮಾನ್ಯವಾಗಿದ್ದು, ಪೊಲೀಸರ ತನಿಖೆ ಬಳಿಕ ಯಾರೇ ತಪ್ಪಿತಸ್ಥರೆಂದು ಕಂಡುಬಂದರೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

LEAVE A REPLY

Please enter your comment!
Please enter your name here